ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಈ ವಿಷಯವನ್ನು ತಿಳಿಸಿದರು.ಸಹಕಾರಿ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಕೆ.ಎಚ್. ಪಾಟೀಲರು ರಾಜ್ಯದಲ್ಲಿ ಸಚಿವರಾಗಿ, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಇಂತಹ ಮಹಾನ ನಾಯಕನ ಹೆಸರನ್ನು ಸಾರ್ವಜನಿಕ ಸೇವೆ ಮಾಡುತ್ತಿರುವ ಗದಗ ಮೆಡಿಕಲ್ ಕಾಲೇಜಿಗೆ ನಾಮಕರಣ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ವಿವರಿಸಿದರು.





