ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿಗಳು….

ಕನ್ನಡದ ಕಿರುತೆರೆ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡ ಸಿಂಗರ್ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು ಮೂಡಿದೆ. ಪತಿ ಧನಂಜಯ್ ಶರ್ಮ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಅಖಿಲಾ ನಿರ್ಧರಿಸಿದ್ದಾರೆ. ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮ ಅರ್ಜಿ ಸಲ್ಲಿಸಿದ್ದಾರೆ.ಯುವ ಗಾಯಕಿ ಅಖಿಲಾ ಪಜಿಮಣ್ಣು ಅವರ ಖಾಸಗಿ ಬದುಕಿನ ಬಗ್ಗೆ ಶಾಕಿಂಗ್ ಸುದ್ದಿ ಇದು. ‘ಕನ್ನಡ ಕೋಗಿಲೆ’ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಅಖಿಲಾ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಚ್ಛೇದನಕ್ಕಾಗಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 3 ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ ಧನಂಜಯ್ ಶರ್ಮ ಜೊತೆ ಅಖಿಲಾ ಪಜಿಮಣ್ಣು ವಿವಾಹ ನೆರವೇರಿತ್ತು. ಆದರೆ ಅವರ ಸಂಸಾರದಲ್ಲಿ ಸಾಮರಸ್ಯ ಮಾಯವಾಗಿದೆ. ಧನಂಜಯ್ ಶರ್ಮಾ ಮತ್ತು ಅಖಿಲಾ ಪಜಿಮಣ್ಣು ಅವರು ಬೇರಾಗಲು ನಿರ್ಧರಿಸಿದ್ದಾರೆ.

ಅಖಿಲಾ ಅವರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನವರು. ಕಿರುತೆರೆ ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಅವರು ಖ್ಯಾತಿ ಗಳಿಸಿದ್ದಾರೆ. ಸುಮಧುರ ಗಾಯನದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರು ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಅವರು ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಬುಧವಾರ ಈ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್ ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಧನಂಜಯ್ ಶರ್ಮ ಅವರು ಪುತ್ತೂರಿನ ನ್ಯಾಯಾಲಯಕ್ಕೆ ಆಗಮಿಸಿ ಹೇಳಿಕೆ ನೀಡಿ ವಾಪಸ್ ತೆರಳಿದ್ದಾರೆ. ಸದ್ಯದಲ್ಲೇ ಅವರು ಅಮೆರಿಕಕ್ಕೆ ಹೋಗಲಿದ್ದಾರೆ. ಸದ್ಯ ನ್ಯಾಯಾಲಯದಲ್ಲಿ ಈ ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ಮುಗಿದಿದೆ. ನ್ಯಾಯಾಲಯವು ಶುಕ್ರವಾರಕ್ಕೆ (ಜೂನ್ 19) ತೀರ್ಪು ಕಾಯ್ದಿರಿಸಿದೆ. ಅರೇಂಜ್ ಮ್ಯಾರೇಜ್ ಮಾಡಿಕೊಂಡಿದ್ದ ಅಖಿಲಾ ಮತ್ತು ಧನಂಜಯ್ ಅವರು ಈಗ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!