ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು

ಹುಬ್ಬಳ್ಳಿ: ಇಲ್ಲಿನ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಹಾಗೂ ಸಂಜಯ ಸವದತ್ತಿ (20) ಎಂಬ ಇಬ್ಬರು ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದರು. ಬಳಿಕ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿ (21) ಕೂಡ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಇನ್ನುಳಿದ ಗಾಯಾಳುಗಳಾದ ವಿನಾಯಕ ಬಾತಕೇರ (12), ಪ್ರಕಾಶ ಬಾರಕೇರ (42), ಮಂಜು ತೋರದ (22), ಪ್ರವೀಣ ಚಲವಾದಿ (24), ತೇಜಸ್ ರೆಡ್ಡಿ (26) ಮತ್ತು ಶಂಕರ ರಾಯನಗೌಡ್ರ (29) ಇವರುಗಳ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಡಿಸೆಂಬರ್ 23ರಂದು ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿದೆ. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರವು ಈಗಾಗಲೇ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಕೆಎಂಸಿಆರ್ಐ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಈ ಘೋಷಣೆ ಮಾಡಿದ್ದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ದೇವರು ನೀಡಲಿ ಎಂದು ಅವರು ಪ್ರಾರ್ಥಿಸಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!