ಚಾಮುಂಡಿ ಬೆಟ್ಟ ಗ್ರಾಮ ವ್ಯಾಪ್ತಿಯ ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ : ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR

ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆ
ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ ಕುಮಾರ್, ಇವರ ಸಹೋದರ ವೈ.ಎಸ್. ರಮೇಶ್ ಬಾಬು, ತಾವರೆಕಟ್ಟೆ ಗ್ರಾಮದ ನಿವಾಸಿ ಕೆಸ್ಸಾರ್ಟಿಸಿ ನಿವೃತ್ತ ನೌಕರ ವಿ. ಶ್ರೀನಿವಾಸ್ ಹಾಗೂ ರಘು ವಿರುದ್ದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಕುರುಬಾರಹಳ್ಳಿ ಸರ್ವೇ ನಂಬರ್ 91ರ 1.20 ಎಕರೆ ಗುಂಟೆ ಜಮೀನು ಎಂ. ಮಂಜೀತ್ ಅವರ ಖಾಸಗಿ ಸ್ವತ್ತಾಗಿದೆ.

 

 

ಪೋಡಿ ಮತ್ತು ಹದ್ದು ಬಸ್ತ್ ಬಳಿಕ ಕಾಂಪೌಂಡ್ ನಿರ್ಮಾಣಕ್ಕೆ ಹೋದಾಗ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಅಡ್ಡಿಪಡಿಸಿ ಗಲಾಟೆ ಎಬ್ಬಿಸಿದ್ದರು.
ಕಳೆದ ವರ್ಷ ನವೆಂಬರ್ 26ರಂದು ಘಟನೆ ನಡೆದಿತ್ತು.ಕಾಂಪೌಂಡ್ ನಿರ್ಮಾಣ ಕಾರ್ಯಕ್ಕೆ ಅಡ್ಡಿಪಡಿಸಿ ಜಾಗದ ಮಾಲೀಕರಿಗೆ ಅವಾಚ್ಯ ಅವಾಚ್ಯ ಶಬ್ದಗಳಿಂದ ನಿಂದಿಸಿ , ಕೊಲೆ ಬೆದರಿಕೆ ಹಾಕಿದ್ದರು.ಇದರ ವಿರುದ್ದ ಕೆ.ಆರ್.‌ ಪೊಲೀಸ್ ಠಾಣೆಗೆ ಜಾಗದ ಮಾಲೀಕರು ದೂರು ನೀಡಿದ್ದರು.ಈ ಬಗ್ಗೆ ಕೆ.ಆರ್.‌ ಪೊಲೀಸರು ಎನ್.ಸಿ.ಆರ್ ಮಾತ್ರ ಮಾಡಿದ್ದರು.ಈ ಬಗ್ಗೆ ಮಾಲೀಕರು 4ನೇ ಜೆ.ಎಂ.ಎಫ್.ಸಿ ಕೋರ್ಟ್ ನ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಅರೋಪಿಗಳ ವಿರುದ್ದ FIR ದಾಖಲಿಸುವಂತೆ ಕೆ.ಅರ್. ಪೊಲೀಸರಿಗೆ ಆದೇಶಿಸಿದೆ.ಕೋರ್ಟ್ ಅದೇಶದನ್ವಯ ನಾಲ್ವರು ಆರೋಪಿಗಳ ವಿರುದ್ದ ವಿವಿಧ ಸೆಕ್ಷನ್ ಗಳಡಿ ಎಫ್.ಐ.ಆರ್. ದಾಖಲಿಸಿದ್ದಾರೆ

  • Related Posts

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

    ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

      ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!