ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ‌ ಸೂಚನೆ.

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ ಮಾನ ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ದವಿದೆ ಎಂದರು.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ ಎಂದು ಸೂಚಿಸಿದರು.

ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು. ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಆದ್ದರಿಂದ ಶಿಕ್ಷೆಯ ಪ್ರಮಾಣ
ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು ಎಂದರು. ಪೇದೆಗಳು, ಎಸ್ ಐ ಗಳು, ಇನ್ಸ್ ಪೆಕ್ಟರ್ ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!