ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಯಶ್ ಲುಕ್ ಹೇಗಿದೆ?

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಅಂತೆಯೇ ಇಂದು ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚುವಂತೆ ಆಗಿದೆ. ಅದಕ್ಕೆ ಕಾರಣ ಆಗಿರೋದು ಈ ಚಿತ್ರದ ಗ್ಲಿಂಪ್ಸ್. ಬರ್ತ್ಡೇ ಪ್ರಯುಕ್ತ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಜನವರಿ 8 ಯಶ್ ಜನ್ಮದಿನ. ಈ ಪ್ರಯುಕ್ತ ಚಿತ್ರದ ಬಗ್ಗೆ ಅಪ್ಡೇಟ್ ಕೊಡೋದಾಗಿ ತಂಡದವರು ಮೊದಲೇ ಹೇಳಿದ್ದರು. ಅದರಂತೆಯೇ ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಇದು ಗಮನ ಸೆಳೆಯುತ್ತಿದೆ.

ಯಶ್ ಅವರು ಕ್ಲಾಸಿ ಲುಕ್ನಲ್ಲಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಎಂಟ್ರಿ ಕೊಡೋದು ವಿಂಟೇಜ್ ಕಾರಿನಲ್ಲಿ. ಈ ಲುಕ್ನ ಈ ಮೊದಲೇ ಪೋಸ್ಟರ್ನಲ್ಲಿ ರಿಲೀಸ್ ಮಾಡಲಾಗಿತ್ತು. ಯಶ್ ಅವರ ಲುಕ್ ಈಗ ಗಮನ ಸೆಳೆಯುತ್ತಿದೆ.
‘ಟಾಕ್ಸಿಕ್’ ಚಿತ್ರದ ಬಗ್ಗೆ ಯಾವುದೇ ಹಿಂಟ್ ಕೊಡದ ರೀತಿಯಲ್ಲಿ ಈ ಚಿತ್ರದ ಗ್ಲಿಂಪ್ಸ್ ಮೂಡಿ ಬಂದಿದೆ. ಈ ಸಿನಿಮಾ ಈ ವರ್ಷಾಂತ್ಯಕ್ಕೆ ತೆರೆಗೆ ಬರಲಿದೆ. ಹೀಗಾಗಿ ಈಗಲೇ ಹೆಚ್ಚಿನ ವಿಚಾರ ರಿವೀಲ್ ಮಾಡೋದು ಬೇಡ ಎಂಬ ನಿರ್ಧಾರಕ್ಕೆ ತಂಡ ಬಂದಂತಿದೆ
‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಅವರು ದೊಡ್ಡ ಬಜೆಟ್ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಾ ಇದ್ದಾರೆ
ಯಶ್ ಎಂಟ್ರಿ ಕೊಡೋ ಕ್ಲಬ್ನಲ್ಲಿ ದೊಡ್ಡ ಮಟ್ಟದಲ್ಲಿ ಪಾರ್ಟಿ ನಡೆಯುತ್ತಾ ಇರುತ್ತದೆ. ಈ ಪಾರ್ಟಿಯಲ್ಲಿ ಯಶ್ ಕೂಡ ಭಾಗಿ ಆಗುತ್ತಾರೆ. ಆ ಬಳಿಕ ಅವರು ಪಾರ್ಟಿಯಲ್ಲಿ ಎಂಜಾಯ್ ಮಾಡುತ್ತಾರೆ. ಹುಡುಗಿಯ ಮೇಲೆ ಎಣ್ಣೆ ಸುರಿಯುತ್ತಾರೆ.

‘ಟಾಕ್ಸಿಕ್’ ಚಿತ್ರದಲ್ಲಿ ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಡ್ರಗ್ಸ್ ಬಗ್ಗೆ ಇರಲಿದೆ ಎಂದು ಹೇಳಲಾಗುತ್ತಿದೆ. ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!