ಟೊಮೆಟೊ ದರ ಏಕಾಏಕಿ ಕುಸಿತ ; ಗದಗ ರೈತರು ಕಂಗಾಲು….

ರೈತರ ಗೋಳು ಕೇಳುವವರು ಯಾರು ಎಂಬ ಪರಿಸ್ಥಿತಿಗೆ ತಲುಪಿದೆ ಕರ್ನಾಟಕದ ರೈತರ ಪರಿಸ್ಥಿತಿ. ಅದಕ್ಕೆ ನಿದರ್ಶನದಂತೆ ಕರ್ನಾಟಕದಲ್ಲಿ ಟಮೋಟ ದರವು ಏಕಾಏಕಿ ಕುಸಿತವಾಗಿದೆ. : ಗದಗದ ಎಪಿಎಂಸಿಯಲ್ಲಿ ಟೊಮೆಟೊ ದರ ಭಾರೀ ಕುಸಿತದಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 25 ಕೆಜಿ ಟ್ರೇ ಕೇವಲ 50 ರೂ.ಗೆ ಮಾರಾಟವಾಗುತ್ತಿದೆ. ಬೆಳೆಗೆ ಹೆಚ್ಚಿನ ವೆಚ್ಚವಾಗಿದ್ದರೂ, ಕಡಿಮೆ ದರದಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಬದನೆಕಾಯಿ ಮತ್ತು ನುಗ್ಗೆಕಾಯಿ ದರಗಳೂ ಕುಸಿದಿವೆ. ಸರ್ಕಾರದ ವಿರುದ್ಧ ರೈತರು ಕಿಡಿಕಾರಿದ್ದಾರೆ. ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದ್ದು ರೈತರು ಕಂಗಾಲಾಗಿದ್ದಾರೆ. ದರ ಕುಸಿತಕ್ಕೆ ಗದಗ ಎಪಿಎಂಸಿಯಲ್ಲಿ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ಅಗತ್ಯ ವಸ್ತುಗಳ ದರಗಳು ಏರಿಕೆಯಾದರೂ ರೈತರು ಬೆಳೆದ ಬೆಳೆಗಳ ದರ ಏಕೆ ಏರಿಕೆಯಾಗುತ್ತಿಲ್ಲ ಅಂತ ಕಿಡಿಕಾರಿದ್ದಾರೆ. ಅಷ್ಟಕ್ಕೂ ಅನ್ನ ನೀಡುವ ಅನ್ನದಾತನಿಗೆ ಸರಿಯಾದ ಬೆಲೆ ಸಿಗಲಿಲ್ಲವಾದರೆ ದೇಶ ಅಭಿವೃದ್ಧಿಯಾಗುವುದು ಖಂಡಿತವಾಗಿಯೂ ಕಷ್ಟವಾಗಿದೆ.

ಮಾರುಕಟ್ಟೆಗೆ ಹೆಚ್ಚು ಫಸಲು ಬಂದಿದ್ದರಿಂದ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. 25 ಕೆಜಿ ಟ್ರೇ ಕೇವಲ 50 ರೂ. ಮಾರಾಟವಾಗುತ್ತಿದೆ. ಮಾರುಕಟ್ಟೆಯಲ್ಲಿ 20-30 ರೂ. ಕೆಜಿ ಟೊಮೆಟೊ ಮಾರಾಟವಾಗುತ್ತಿದ್ದರು, ರೈತರಿಗೆ ಕೆಜಿ ಕೇವಲ 2 ರೂ. ಸಿಗುತ್ತಿದೆ. ರೈತರಿಗಾಗುತ್ತಿರುವ ಈ ಅನ್ಯಾಯ ತಿಳಿದಿದ್ದರೂ ಎಪಿಎಂಸಿ ಅಧಿಕಾರಿಗಳು ಮೌನವಾಗಿದ್ದಾರೆ. ಬದನೆಕಾಯಿ, ನುಗ್ಗೆಕಾಯಿ ಬೆಲೆಯೂ ಕುಸಿತವಾಗಿದೆ. ಒಂದು ಟ್ರೇ ಬದನೆಕಾಯಿಗೆ 50 ರಿಂದ 80 ರೂ ಬೆಲೆ ಇದೆ. ನುಗ್ಗೆಕಾಯಿ ಒಂದು ಕೆಜಿಗೆ 10 ರೂ ಮಾರಾಟವಾಗುತ್ತಿದೆ. ಇನ್ನು ಒಂದು ಟ್ರೇ ಟೊಮೆಟೊ ಮಾರುಕಟ್ಟೆಯಲ್ಲಿ 50 ರೂ. ಮಾರಾಟವಾಗುತ್ತಿದೆ. ರೈತರು ಎಕರೆಗೆ 30-50 ಸಾವಿರ ರೂ ಮಾಡಿರುವ ಖರ್ಚು ಕೂಡ ವಾಪಸ್ ಬರಿತ್ತಿಲ್ಲ. ಸಾಮಾನ್ಯ ಮಾರುಕಟ್ಟೆಯಲ್ಲಿ ಸಿಗುವ ಬೆಲೆಯೂ ಕಷ್ಟಪಟ್ಟು ಬೆಳೆದ ರೈತನಿಗೆ ಸಿಗುತ್ತಿಲ್ಲ. ಬದಲಾಗಿ ಇದು ಮಧ್ಯವರ್ತಿಗಳಿಗೆ ಸೇರುತ್ತಿದೆ. ಕೃಷಿ ಅವರಂಬಿಕ ದೇಶವಾದ ಭಾರತದಲ್ಲಿ, ರೈತರಿಗೆ ಹೆಚ್ಚಿನ ಮನ್ನಣೆ ನೀಡುವಂತಾಗಲಿ ಎಂಬುದು ಎಲ್ಲರ ಮನವಿಯಾದರೂ ಸಹ, ಅಧಿಕಾರಿಗಳು ಇದರ ಬಗ್ಗೆ ಮೌನದಿಂದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಒಂದು ಟ್ರೇ ನಲ್ಲಿ ಸುಮಾರು 20-25 ಕೆಜಿ ಟೊಮೆಟೊ ಇರುತ್ತೆ. 2 ರೂ ಕೆಜಿಯಂತೆ ಟೊಮೆಟೊ ಮಾರಾಟವಾಗುತ್ತಿದ್ದು, ಸರ್ಕಾರ ಹಾಗೂ ಎಪಿಎಂಸಿ ವರ್ತಕರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರುಕಟ್ಟೆಗೆ ಕ್ವಿಂಟಾಲ್ಗಟ್ಟಲೇ ಟೊಮೆಟೊ ತಂದರೂ ರೈತರ ಕೈ ಖಾಲಿ ಖಾಲಿ ಆಗಿದೆ.ಟೊಮೆಟೊ ಕಟಾವು ಮಾಡುವ ಕಾರ್ಮಿಕರಿಗೆ 300 ರೂ ದಿನ ಕೂಲಿ ಕೊಡಬೇಕು. ಮಾರುಕಟ್ಟೆಗೆ ಒಂದು ಟ್ರೇ ಹೇರಿಕೊಂಡು ಬಂದರೆ 30 ರೂ. ವಾಹನ ಬಾಡಿಗೆ ಇದೆ. ಜೊತೆಗೆ ದಲ್ಲಾಳಿಗೆ 10 ರೂ. ಕೊಡಬೇಕು. ಹಾಗಾಗಿ ಒಂದು ಟ್ರೇ ಗೆ ರೈತರಿಗೆ 10 ರೂ ಮಾತ್ರ ಸಿಗುತ್ತದೆ ಎಂದು ಕಿಡಿಕಾರಿದ್ದಾರೆ. ಆ 10 ರೂ ಟೀ, ತಿಂಡಿ ಮಾಡಿದರೆ ಖಾಲಿ ಕೈಯಲ್ಲಿ ಮನೆಗೆ ಹೋಗಬೇಕಾಗುತ್ತೆ ಎಂದು ಗೋಳಾಡಿದರು.

ಹಗಲು ರಾತ್ರಿ ಕಷ್ಟ ಪಟ್ಟು ಟೊಮೆಟೊ ಬೆಳೆದಿದ್ದೇವೆ. ಮಾರುಕಟ್ಟೆಗೆ ತಂದರೆ ಸೂಕ್ತ ದರ ಸಿಗುತ್ತಿಲ್ಲ ಹೀಗಾದರೆ ಕುಟುಂಬ ನಿರ್ವಹಣೆಗೆ ತುಂಬಾನೆ ತೊಂದರೆ ಆಗುತ್ತದೆ. ಸರ್ಕಾರ ಟೊಮೆಟೊ ಬೆಳೆದ ರೈತರ ನೆರವಿಗೆ ಬರಬೇಕು. ಸೂಕ್ತದ ದರ ನಿಗದಿ ಮಾಡಬೇಕೆಂದು ಒತ್ತಾಯಿಸಲಾಗಿದೆ. ಬೆಳೆದ ಬೆಳೆಗೆ ಸರಿಯಾದ ಫಲ ಸಿಗಲಿಲ್ಲವಾದರೆ ರೈತರು ಸಾಲದ ಮಡುವಿನಲ್ಲಿ ಬೀಳುತ್ತಾರೆ. ನಂತರ ತಮ್ಮ ಜೀವನದಲ್ಲಿ ಏರುಪೇರು ಆದಾಗ ಅವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಈ ರೀತಿ ಆಗಬಾರದೆಂದರೆ ಸರ್ಕಾರ ಹಾಗೂ ಎಪಿಎಂಸಿ ವರ್ತಕರು ಈ ವಿಷಯದ ಬಗ್ಗೆ ಕೂಡಲೇ ಗಮನಹರಿಸಬೇಕಾದದು ಪ್ರಮುಖವಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!