ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!