ತಮಿಳುನಾಡಿನಲ್ಲಿ ಮತ್ತೆ ಭಾರಿ ಮಳೆ : ಶಾಲೆಗಳಿಗೆ ರಜೆ , ಯೆಲ್ಲೋ – ಆರೆಂಜ್ Alert ಘೋಷಣೆ

ತಮಿಳುನಾಡು: ಬುಧವಾರ ರಾತ್ರಿಯಿಂದ ಆರಂಭವಾದ ಭಾರೀ ಮಳೆಯಿಂದಾಗಿ ತಮಿಳುನಾಡು ಸರ್ಕಾರ ಚೆನ್ನೈ ಮತ್ತು ಸಮೀಪದ ಜಿಲ್ಲೆಗಳಲ್ಲಿ ಶಾಲೆಗಳಿಗೆ ಗುರುವಾರ ರಜೆ ಘೋಷಿಸಿದೆ. ವಿಲ್ಲುಪುರಂ, ತಂಜಾವೂರು, ಮೈಲಾಡುತುರೈ, ರಾಮನಾಥಪುರಂ, ದಿಂಡಿಗಲ್, ಕಡಲೂರು ಮತ್ತು ಪುದುಕ್ಕೊಟ್ಟೈ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಗುರುವಾರ ಮಳೆ ಪೀಡಿತ ಪ್ರದೇಶದ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಪ್ರಸ್ತುತ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದೆ ಎಂದು ಗುರುತಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ-ವಾಯುವ್ಯದ ಕಡೆಗೆ ಶ್ರೀಲಂಕಾ-ತಮಿಳುನಾಡು ಕರಾವಳಿಯ ಕಡೆಗೆ ಚಂಡಮಾರುತವು ಚಲಿಸುವ ನಿರೀಕ್ಷೆಯಿದೆ.
ಇದರಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್‌ಪಟ್ಟು, ತಿರುವಣ್ಣಾಮಲೈ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರ್, ತಿರುಚ್ಚಿ, ಶಿವಗಂಗಾ, ರಾಮನಾಥಪುರಂ, ಮೈಲಾಡುತುರೈ, ನಾಗಪಟ್ಟಿಣಂ, ಕೊಯಮತ್ತೂರು, ತಿರುಪುರ್, ಕರೂರ್, ಥೇಣಿ, ದಿಂಡಿಗಲ್, ಮಧುರೈ, ವಿರುದುಕುಡಿನಗರ, ಟಿ.ವಿರುದುಕುಡಿನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೆಲವು ಜಿಲ್ಲೆಗಳಿಗೆ ಯೆಲ್ಲೋ- ಆರೇಂಜ್ ಅಲರ್ಟ್ ಘೋಷಣೆ
ಪ್ರಾದೇಶಿಕ ಹವಾಮಾನ ಕೇಂದ್ರ (RMC) ಗುರುವಾರ ತಮಿಳುನಾಡಿನ ಹಲವಾರು ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬುಧವಾರ, ಚೆನ್ನೈ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಇದು ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ಮಾಹಿತಿ ಒದಗಿಸಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!