ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು….

ರಾಜ್ಯದಲ್ಲಿ ಹೆಸರು ನೋಂದಾಯಿಸಿಕೊಂಡ 7,13,862 ವಿದ್ಯಾರ್ಥಿಗಳಲ್ಲಿ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದುಕಲಾವಿಭಾಗ ವಾಣಿಜ್ಯ ವಿಭಾಗ ಹಾಗೂ ವಿಜ್ಞಾನ ವಿಭಾಗ ಈ ಮೂರು ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

*ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

*ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್ ಆಗಿದ್ದಾರೆ.
*ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 599 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

*ಫಲಿತಾಂಶದ ಅನುಸಾರ ಜಿಲ್ಲೆಗಳು ಪಡೆದುಕೊಂಡ ಕ್ರಮಾಂಕಗಳು….

ಉಡುಪಿ ಫಸ್ಟ್- ಯಾದಗಿರಿ ಲಾಸ್ಟ್ಇನ್ನೂ ಫಲಿತಾಂಶವನ್ನು ಲೆಕ್ಕಾಚಾರ ಮಾಡುವುದಾದರೆ, ರಾಜ್ಯದಲ್ಲಿ ಉಡುಪಿ ಜಿಲ್ಲೆಯು 93.90 ಫಲಿತಾಂಶದ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ಕ್ರಮಾಂಕವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗಳಿಸಿಕೊಂಡಿವೆ. ಇನ್ನೂ ಕೊನೆಯ ಸ್ಥಾನವನ್ನು ಪಡೆದುಕೊಂಡ ಜಿಲ್ಲೆ ಎಂದರೆ ಯಾದಗಿರಿ. ಜಿಲ್ಲೆಯು ಶೇಕಡ 48.45 ಫಲಿತಾಂಶವನ್ನು ತನ್ನದಾಗಿಸಿಕೊಳ್ಳುವ ಮುಖಾಂತರ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.53, ವಾಣಿಜ್ಯ ವಿಭಾಗದಲ್ಲಿ ಶೇ.76.07, ಹಾಗೂ ವಿಜ಼್ಞಾನ ವಿಭಾಗದಲ್ಲಿ ಶೇ.82ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದರು.

ಪ್ರತಿವರ್ಷದಂತೆ ಈ ಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 3,45,694 ಬಾಲಕಿಯರು ಹಾಜರಾಗಿದ್ದರು. ಈ ಪೈಕಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇ. 77.88ರಷ್ಟು ಬಾಲಕಿಯರು ಉತ್ತೀರ್ಣರಾದಂತಾಗಿದೆ. ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದು, ಈ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ.

2 ಹಾಗೂ 3ನೇ ಬಾರಿ ಪರೀಕ್ಷೆ: ಕಳೆದ ವರ್ಷ ಹೋಲಿಸಿದರೆ ಈ ಬಾರಿ ಶೇ.8ರಷ್ಟು ಉತ್ತೀರ್ಣರಾದವರು ಕಡಿಮೆಯಾಗಿದ್ದಾರೆ. ವೆಬ್ ಕಾಸ್ಟ್, ಸಿಸಿಟಿವಿ ಕಣ್ಗಾವಲಿನಿಂದ ಈ ಬಾರಿ ಫಲಿತಾಂಶ ಕಡಿಮೆ ಬಂದಿದೆ ಎಂದು ಹೇಳಲಾಗುತ್ತಿದೆ. ಪಾಸಾಗದ ಆಥವಾ ಹೆಚ್ಚು ಅಂಕ ಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಏ.24ರಿಂದ ಮೇ 8ರವರೆಗೆ, ಪರೀಕ್ಷೆ-3 ಜೂ.6ರಿಂದ ಜೂ. 21ರವರೆಗೆ ನಡೆಯಲಿದೆ. 2 ಹಾಗೂ 3ನೇ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವುದಕ್ಕೆ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ ಎಂದು ಮಂಡಳಿ ತಿಳಿಸಿದೆ.

ಬಂದಿರುವ ಅಂಕಗಳಲ್ಲಿ ತೃಪ್ತಿ ಇಲ್ಲದೆ ಇರುವವರು ಹಾಗೂ ಹೆಚ್ಚಿನ ಅಂಕಗಳಿಗಾಗಿ ಪ್ರಯತ್ನಪಡುವವರು ಹಾಗೂ ಮರು ಪರೀಕ್ಷೆ ಬರೆಯುವವರೆಗೂ ಸಹ ಸದಾ ಅವಕಾಶವನ್ನ ನೀಡಲಾಗಿದೆ ಎಂದು ಮಂಡಳಿ ತಿಳಿಸಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!