ನಟ ಧನುಷ್ ಪರವಾಗಿ ಕೋರ್ಟ್ನಲ್ಲಿ ತೀರ್ಪು:ನಯನಾತಾರಾಗೆ ಭಾರೀ ಹಿನ್ನಡೆ!

ನಟಿ ನಯನತಾರ ಮತ್ತು ನಟ ಧನುಷ್ ಇಬ್ಬರು ಸಹ ಭಾರತೀಯ ಚಿತ್ರರಂಗದ ಸ್ಟಾರ್ CC ಹಾಗೂ ನಟಿಯರು. ಇಬ್ಬರೂ ಸಹ ದಶಕಗಳಿಂದ ಚಿತ್ರರಂಗದಲ್ಲಿದ್ದಾರೆ. ಇಬ್ಬರಿಗೂ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗ ಇದೆ. ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು. ಈಗ ಅವರ ಪರವಾಗಿ ದೊಡ್ಡ ತೀರ್ಪು ಹೊರ ಬಂದಿದೆ.ನಟಿ ನಯನತಾರಾ ಅವರು ತಮ್ಮ ವಿವಾಹ ಡಾಕ್ಯುಮೆಂಟರಿಗೆ ‘ನಾನುಂ ರೌಡಿ ದಾನ್’ ಚಿತ್ರದ ದೃಶ್ಯವನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ ‘ನೆಟ್ಫ್ಲಿಕ್ಸ್ ಇಂಡಿಯಾ’ ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದೆ. ಕಳೆದ ನವೆಂಬರ್ ತಿಂಗಳಲ್ಲಿ ನಯನತಾರಾ, ಅವರ ಪತಿ ವಿಘ್ನೇಶ್ ಶಿವನ್ ಹಾಗೂ ಇವರ ನಿರ್ಮಾಣ ಸಂಸ್ಥೆ ‘ರೌಡಿ ಪಿಕ್ಚರ್ಸ್’ ವಿರುದ್ಧ ಧನುಷ್ ಅವರು ಕೇಸ್ ಹಾಕಿದ್ದರು. ಧನುಷ್ ಅವರು ನಿರ್ಮಾಣ ಮಾಡಿದ ‘ನಾನುಂ ರೌಡಿ ದಾನ್’ ಚಿತ್ರದ 3 ಸೆಕೆಂಡ್ ದೃಶ್ಯವನ್ನು ‘ನೆಟ್ಫ್ಲಿಕ್ಸ್’ ಡಾಕ್ಯುಮೆಂಟರಿ ‘ನಯನತಾರಾ: ಬಿಯಾಂಡ್ ದಿ ಫೇರೀಟೇಲ್’ನಲ್ಲಿ ಬಳಕೆ ಮಾಡಿದ್ದಾಗಿ ಆರೋಪಿಸಿದ್ದರು.

ಆದ ಕಾರಣ ‘ಒಪ್ಪಿಗೆ ಇಲ್ಲದೆ ಬಳಸಿದ ದೃಶ್ಯವನ್ನು 24 ಗಂಟೆಯಲ್ಲಿ ತೆಗೆಯದೇ ಇದ್ದರೆ ಕಾನೂನಾತ್ಮಕ ಹೋರಾಟ ಮಾಡಲಾಗುವುದು’ ಎಂದು ಧನುಷ್ ಎಚ್ಚರಿಸಿದ್ದರು. ಆದಾಗ್ಯೂ ದೃಶ್ಯವನ್ನು ತೆಗೆದಿರಲಿಲ್ಲ. ಹೀಗಾಗಿ, ಧನುಷ್ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದ್ದರು. ಧನುಷ್ ನಿರ್ಮಾಣ ಸಂಸ್ಥೆ ‘ವುಂಡಬಾರ್ ಫಿಲ್ಮ್ಸ್’ ನಷ್ಟ ಭರಿಸಬೇಕು ಎಂದು ಕೂಡ ಕೋರಿತ್ತು. ಈ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ನಟ ಧನುಷ್ ಹಾಗೂ ನಟಿ ನಯನತಾರಾ ವಿರುದ್ಧ ಕಿತ್ತಾಟಕ್ಕೂ ಇದು ಕಾರಣ ಆಗಿತ್ತು. ಈಗ ಈ ಅರ್ಜಿಯನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಆದಾಗ್ಯೂ ನಟಿ ನಯನತಾರಾ ‘ನಾನೂಮ್ ರೌಡಿ ದಾನ್’ ಸಿನಿಮಾದ ಹಾಡು, ವಿಡಿಯೋ ತುಣುಕು ಬಳಸಿಕೊಳ್ಳಲು ಎರಡು ವರ್ಷಗಳ ಹಿಂದೇ ಅನುಮತಿ ಕೋರಿದ್ದರು. ಆದರೆ, ಅದಕ್ಕೆ ಧನುಷ್ ಕಡೆಯಿಂದ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಅದೇ ಸಿನಿಮಾದ ಶೂಟಿಂಗ್ ದೃಶ್ಯವನ್ನು ಬಳಸಿಕೊಂಡಿದ್ದರು. ಆದ ಕಾರಣ ಮೂರು ಸೆಕೆಂಡ್ ಬಳಸಿಕೊಂಡಿದ್ದಕ್ಕೆ 10 ಕೋಟಿ ರೂಪಾಯಿ ನೊಟೀಸ್ನ ಧನುಷ್ ಕಳುಹಿಸಿದ್ದರು. ಹಾಗಾಗಿ ನಟ ಧನುಷ್ ಪರ ಕೋರ್ಟು ತೀರ್ಪು ನೀಡಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!