ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಜೊತೆ ಸಚಿವ ಭೈರತಿ ಸುರೇಶ್, ಕಾನೂನು ಸಲಹೆಗಾರ ಹಾಗೂ ಶಾಸಕ ಪೊನ್ನಣ್ಣ, ಡಾ.ರವಿಕುಮಾರ್ ಉಪಸ್ಥಿತರಿದ್ದರು.





