ನಿಮಗೇನಾದ್ರೂ ನೆಲದ ಮೇಲೆ ಮಲಗುವ ಅಭ್ಯಾಸ ಇದ್ರೆ, ವೈದ್ಯರು ಏನ್ ಹೇಳ್ತಾರೆ ನೋಡಿ….

ತುಂಬಾ ಜನರಿಗೆ ನೆಲದ ಮೇಲೆ ಮಲಗುವ ಅಭ್ಯಾಸ ಇರುತ್ತದೆ. ಅದೆಂತಹದ್ದೇ ಲಗ್ಶುರಿ ಹಾಸಿಗೆ ಇರಲಿ ನೆಲಕ್ಕಿಂತ ಒಳ್ಳೆಯದು ಇಲ್ಲ ಎನ್ನುವವರು ಈಗಿನ ಕಾಲದಲ್ಲಿಯೂ ಹೆಚ್ಚಾಗೆ ಇದ್ದಾರೆ. ಆದರೆ ಆ ರೀತಿಯ ಯಾವುದೇ ಹಾಸಿಗೆ ಇಲ್ಲದೆ ಮಲಗಿಕೊಳ್ಳುವುದು ಎಷ್ಟು ಉತ್ತಮ…. ಅದು ಯಾವ ರೀತಿಯ ಪ್ರಯೋಜನಗಳನ್ನು ನೀಡುತ್ತದೆ? ದೇಹಕ್ಕೆ ಒಳ್ಳೆಯದು ಅಲ್ಲವೇ ಎಂಬ ಗೊಂದಲ ಎಲ್ಲರನ್ನೂ ಕಾಡಿಯೇ ಇರುತ್ತದೆ. ಆದರೆ ವೈದ್ಯರು ಈ ಅಭ್ಯಾಸ ದೇಹಕ್ಕೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಇದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜನಗಳಿವೆ ಎನ್ನುತ್ತಾರೆ ವೈದ್ಯರು. ಹಾಗಿದ್ದರೆ ಇದರಿಂದ ಯಾವ ರೀತಿಯ ಪ್ರಯೋಜನಗಳು ಅಥವಾ ಲಾಭಗಳು ಇವೆ ಎಂಬುದನ್ನು ತಿಳಿದುಕೊಳ್ಳಿ.

ಕೆಲವರು ಎಷ್ಟೇ ದಪ್ಪನೆಯ ಹಾಸಿಗೆ ಇದ್ದರೂ ನೆಲದ ಮೇಲೆ ಮಲಗುವುದಕ್ಕೆ ಇಷ್ಟಪಡುತ್ತಾರೆ. ಮಧ್ಯಾಹ್ನವಾಗಲಿ, ರಾತ್ರಿಯಾಗಲಿ ಚೊಕ್ಕದಾದ ನೆಲದ ಮೇಲೆ ಹಾಯಾಗಿ ಮಲಗುವವರನ್ನು ನಾವು ನೋಡಿರುತ್ತೇವೆ. ಅದರಲ್ಲಿಯೂ ಈ ಬೇಸಿಗೆಯಲ್ಲಿ ಇಂತಹ ಅಭ್ಯಾಸಗಳನ್ನು ರೂಢಿಸಿಕೊಂಡಿರುವವರು ಪ್ರತಿಯೊಬ್ಬರ ಮನೆಯಲ್ಲಿಯೂ ಇರಬಹುದು. ಕೆಲವರಿಗಂತೂ ಹಾಸಿಗೆಯ ಮೇಲೆ ಮಲಗಿದರೆ ಮೈ- ಕೈ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಅವರು ನೆಲದ ಮೇಲೆ ಸುಖವಾಗಿ ನಿದ್ರೆ ಮಾಡಲು ಬಯಸುತ್ತಾರೆ. ಆದರೆ ಇದು ಒಳ್ಳೆಯ ಅಭ್ಯಾಸವೇ? ಅಲ್ಲವೇ ಎಂಬುದು ಎಲ್ಲರನ್ನೂ ಕಾಡುವ ಪ್ರಶ್ನೆ. ವೈದ್ಯರು ಈ ಅಭ್ಯಾಸ ಬಹಳ ಒಳ್ಳೆಯದು ಎಂದು ಹೇಳುತ್ತಾರೆ. ಏಕೆ ಗೊತ್ತಾ? ಇಲ್ಲಿದೆ ಮಾಹಿತಿ.

ಮಣ್ಣಿನ ಮೇಲ್ಮೈ ದೇಹಕ್ಕೆ ನೈಸರ್ಗಿಕ ಶಕ್ತಿಯನ್ನು ನೀಡುತ್ತದೆ. ಈ ರೀತಿಯ ಅಭ್ಯಾಸ ಬೆನ್ನುಮೂಳೆಯನ್ನು ಗಟ್ಟಿಗೊಳಿಸಲು ಮತ್ತು ಬೆನ್ನು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಇದು ದೇಹಕಕ್ಕೆ ವಿಶ್ರಾಂತಿ ನೀಡುವ ಮೂಲಕ ದಣಿವನ್ನು ಕಡಿಮೆ ಮಾಡುತ್ತದೆ. ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ನಾವು ನೆಲದ ಮೇಲೆ ಮಲಗಿದಾಗ ನಮ್ಮ ದೇಹ ನೇರವಾಗಿರುತ್ತದೆ ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುವುದಲ್ಲದೆ ಸ್ನಾಯುಗಳು ಸಡಿಲಗೊಳ್ಳುತ್ತದೆ. ನೋವುಗಳು ಕ್ರಮೇಣ ಕಡಿಮೆಯಾಗುತ್ತದೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳಿವೆ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು ತಿಳಿದುಕೊಳ್ಳಿ.
ಒಟ್ಟಿನಲ್ಲಿ ಹೇಳುವುದಾದರೆ ಹಾಸಿಗೆಯ ಮೇಲೆ ಮಲಗುವುದಕ್ಕಿಂತ ನೆಲದ ಮೇಲೆ ಮಲಗುವುದು ಉತ್ತಮ ಎಂದು ವೈದ್ಯರು ಹೇಳುತ್ತಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!