ನಿರ್ದೇಶಕ ಸಿಂಪಲ್ ಸುನಿ ಜೊತೆ ಸಿನಿಮಾ ಘೋಷಿಸಿದ ; ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್.

ಬಿಗ್ ಬಾಸ್ ಕನ್ನಡ ವಿನ್ನರ್ ಕಾರ್ತಿಕ್ ಮಹೇಶ್ ಅವರು ಸಿಂಪಲ್ ಸುನಿ ನಿರ್ದೇಶನದ ಹೊಸ ಚಿತ್ರ ‘ರಿಚಿ ರಿಚ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸುನಿ ಅವರೇ ಕಥೆ ಬರೆದಿರುವ ಈ ಚಿತ್ರದಲ್ಲಿ ಕಾರ್ತಿಕ್ ಶ್ರೀಮಂತನಾಗುವ ಕನಸು ಕಾಣುವ ರಿದ್ದೇಶ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಕಾರ್ತಿಕ್ ಮಹೇಶ್ ಅವರು ಒಂದಾದ ಬಳಿಕ ಒಂದರಂತೆ ಸಿನಿಮಾ ಘೋಷಿಸುತ್ತಿದ್ದಾರೆ. ಈ ಮೊದಲು ಅವರು ‘ರಾಮರಸ’ ಹೆಸರಿನ ಚಿತ್ರ ಘೋಷಿಸಿದ್ದರು. ಈಗ ಕನ್ನಡದ ಖ್ಯಾತ ನಿರ್ದೇಶಕನ ಜೊತೆ ಕಾರ್ತಿಕ್ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈ ಚಿತ್ರಕ್ಕೆ ‘ರಿಚಿ ರಿಚ್’ ಎನ್ನುವ ಟೈಟಲ್ ಇಡಲಾಗಿದೆ. ಈ ವಿಚಾರ ಫ್ಯಾನ್ಸ್ಗೆ ಖುಷಿ ನೀಡಿದೆ.
ಕನ್ನಡದಲ್ಲಿ ಹಲವು ಸದಭಿರುಚಿ ಸಿನಿಮಾಗಳನ್ನು ನೀಡಿದವರು ಸಿಂಪಲ್ ಸುನಿ. ಅವರ ನಿರ್ದೇಶನದ ಹಲವು ಚಿತ್ರಗಳು ಹಿಟ್ ಆಗಿವೆ. ಇಡೀ ಕುಟುಂಬ ಕುಳಿತು ನೋಡುವ ಚಿತ್ರಗಳನ್ನು ನಿರ್ದೇಶನ ಮಾಡುವುದರಲ್ಲಿ ಅವರು ಎತ್ತಿದ ಕೈ. ಅವರ ಜೊತೆ ಕಾರ್ತಿಕ್ ಮಹೇಶ್ ಕೈ ಜೋಡಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ‘ರಿಚಿ ರಿಚ್’ ಚಿತ್ರಕ್ಕೆ ಸುನಿ ಅವರೇ ಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಅರವಿಂದ್ ವೆಂಕಟ್ ರೆಡ್ಡಿ ಬಂಡವಾಳ ಹೂಡುತ್ತಿದ್ದಾರೆ. ‘ಎವಿಆರ್ ಎಂಟರ್ಟೇನ್ಮೆಂಟ್’ ನಿರ್ಮಾಣ ಸಂಸ್ಥೆ ಆರಂಭಿಸಿರೋ ಅವರಿಗೆ ಇದು ನಿರ್ಮಾಣದಲ್ಲಿ ಮೊದಲ ಅನುಭವ.

‘ರಿಚಿ ರಿಚ್’ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದೆ. ಟೈಟಲ್ ಜೊತೆ ಕಾರ್ತಿಕ್ ಲುಕ್ ಕೂಡ ರಿವೀಲ್ ಆಗಿದೆ. ಅವರು ಚೆಸ್ ಆಡುತ್ತಿರುವ ರೀತಿಯಲ್ಲಿ ಪೋಸ್ಟರ್ ಇದೆ. ಸುನಿ ನಿರ್ಮಾಣದ ‘ಉಳಿದವರು ಕಂಡಂತೆ’ ಸಿನಿಮಾದಲ್ಲಿ ‘ರಿಚಿ’ ಹೆಸರಿನ ಪಾತ್ರ ಇತ್ತು. ಈ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಈಗ ಅದೇ ಹೆಸರಿನಲ್ಲಿ ಸಿನಿಮಾದ ಟೈಟಲ್ ಆರಂಭ ಆಗಿದೆ.
ನವೆಂಬರ್​​ನಲ್ಲಿ ಸಿಎಂ ಬದಲಾವಣೆ ಆಗೋದು ಪಕ್ಕಾ?
ರಿದ್ದೇಶ್ ಚಿನ್ನಯ್ಯ ಅನ್ನೋದು ಕಥಾ ನಾಯಕನ ಹೆಸರು. ಇದನ್ನು ಶಾರ್ಟ್ ಆಗಿ ಆತ ರಿಚಿ ಎಂದು ಮಾಡಿಕೊಂಡಿದ್ದಾನೆ. ಇವನು ಶ್ರೀಮಂತ ಆಗುವುದು ಹೇಗೆಂದು ಕನಸು ಕಾಣುತ್ತಿದ್ದಾನೆ. ಆ ರೀತಿಯಲ್ಲಿ ಸಿನಿಮಾದ
ಈ ಚಿತ್ರದ ಬಗ್ಗೆ ಸದ್ಯಕ್ಕೆ ಇರೋ ಮಾಹಿತಿ ಇಷ್ಟೇ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಚಾರಗಳನ್ನು ತಂಡ ತೆರೆದಿಡಲಿದೆ. ಕಾರ್ತಿಕ್ ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!