ಪತಿಯ ಮೇಲಿದ್ದ ಅನುಮಾನಕ್ಕೆ,ಅವನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದ ಪತ್ನಿ….

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಹೆಂಡತಿ ತನ್ನ ಪತಿಯ ಮೇಲೆ ಕುದಿಯುವ ಎಣ್ಣೆಯನ್ನು ಸುರಿದ ಘಟನೆ ನಡೆದಿದೆ. ಪತಿ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಿಸಿ ಹೆಂಡತಿ ಈ ಕೃತ್ಯ ಎಸಗಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪತಿಯನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಇದೀಗ ಹೀನ ಕೃತ್ಯ ಎಸಗಿದ ಮಹಿಳೆಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಕೃಷ್ಣಪುರಂನ ಆಟೋ ಚಾಲಕ ಬಾಲಸುಬ್ರಮಣಿಯನ್ (42). ಆತನ ಪತ್ನಿ ಮುತ್ತುಲಕ್ಷ್ಮಿ (34). ಈ ದಂಪತಿಗೆ 3 ಹೆಣ್ಣು ಮತ್ತು ಒಬ್ಬ ಗಂಡು ಮಗ ಇದ್ದಾರೆ. ಗಂಡ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಮುತ್ತುಲಕ್ಷ್ಮಿ ಆತನೊಂದಿಗೆ ಈ ಹಿಂದೆ ಹಲವು ಬಾರಿ ಜಗಳ ಮಾಡಿದ್ದಾಳೆ. ಇತ್ತೀಚಿಗಷ್ಟೇ 25 ದಿನಗಳ ಹಿಂದೆಯೂ ಮುತ್ತುಲಕ್ಷ್ಮಿ ಜಗಳವಾಡಿ ತನ್ನ ಮಕ್ಕಳೊಂದಿಗೆ ತವರು ಮನೆ ಸೇರಿದ್ದಳು. ಮುತ್ತುಲಕ್ಷ್ಮಿ ನಾಲ್ಕು ದಿನಗಳ ಹಿಂದೆ ತನ್ನ ಗಂಡನ ಮನೆಗೆ ಹೋಗಿದ್ದಾಳೆ. ಈ ಪರಿಸ್ಥಿತಿಯಲ್ಲಿ, ಮೇ 30 ರಂದು ಮತ್ತೆ ಗಂಡ ಹೆಂಡತಿ ನಡುವೆ ಜಗಳ ಪ್ರಾರಂಭವಾಗಿದೆ. ಜಗಳ ತಾರಕಕ್ಕೇರಿದ್ದು, ಏಕಾಏಕಿ ಅಡುಗೆ ಮನೆಗೆ ಹೋದ ಮುತ್ತುಲಕ್ಷ್ಮಿ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ತದ್ದು ಸುಬ್ರಮಣಿಯನ್ ಮೇಲೆ ಹಾಕಿದ್ದಾಳೆ.

ಪರಿಣಾಮವಾಗಿ, ನೋವಿನಿಂದ ಕಿರುಚುತ್ತಿದ್ದ ಬಾಲಸುಬ್ರಮಣಿಯನ್ಯನ್ನು ನೆರೆಹೊರೆಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶಿವಂತಿಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುತ್ತುಲಕ್ಷ್ಮಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಆರಂಭಿಕ ತನಿಖೆಯಲ್ಲಿ, ಬಾಲಸುಬ್ರಮಣಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಮುತ್ತುಲಕ್ಷ್ಮಿ ಹೇಳಿಕೊಂಡಿದ್ದಾಳೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!