ಪೊಲೀಸರ ವಾಟ್ಸ್ಆ್ಯಪ್, ಮೊಬೈಲ್ ಹ್ಯಾಕ್: ಬೆಂಗಳೂರಿನ ಪೊಲೀಸರನ್ನೂ ಬಿಡದ ಸೈಬರ್ ವಂಚಕರು!

ಬೆಂಗಳೂರು :- ಎಪಿಕೆ ಫೈಲ್ಗಳನ್ನು ಕಳುಹಿಸಿ ವಾಟ್ಸ್ಆ್ಯಪ್, ಮೊಬೈಲ್ ನಂಬರ್ ಹ್ಯಾಕ್ ಮಾಡುವ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಹೆಚ್ಚಾಗಿದ್ದು, ಇದೀಗ ಬೆಂಗಳೂರು ಪೊಲೀಸರಿಗೂ ಅದರ ಬಿಸಿ ತಟ್ಟಿದೆ. ಬೆಂಗಳೂರಿನ ಹಲವು ಪೊಲೀಸ್ ಇನ್ಸ್ಪೆಕ್ಟರ್ಗಳ ಮೊಬೈಲ್ ಫೋನ್ ಸಂಖ್ಯೆಗಳು ಮತ್ತು ವಾಟ್ಸ್ಆ್ಯಪ್ ಖಾತೆಗಳನ್ನು ಸೈಬರ್ ವಂಚಕರು ಬುಧವಾರ ಎಪಿಕೆ ಫೈಲ್ ಲಿಂಕ್ ಕಳುಹಿಸಿ ಹ್ಯಾಕ್ ಮಾಡಿರುವುದು ಮೂಲಗಳಿಂದ ತಿಳಿದುಬಂದಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು, ಇನ್ಸ್ಪೆಕ್ಟರ್ಗಳು ಸೇರಿದಂತೆ ಅನೇಕ ಪೊಲೀಸ್ ಸಿಬ್ಬಂದಿ ಅಪರಿಚಿತ ಸಂಖ್ಯೆಯ ರಿಸೀವರ್ಗಳು ವಾಟ್ಸ್ಆ್ಯಪ್ನಲ್ಲಿ ಕಳುಹಿಸಿದ ಎಪಿಕೆ ಫೈಲ್ ಲಿಂಕ್ ಅನ್ನು ದುರುದ್ದೇಶಪೂರಿತವೆಂದು ತಿಳಿಯದೆ ಕ್ಲಿಕ್ ಮಾಡಿದ್ದಾರೆ ಎನ್ನಲಾಗಿದೆ.

ವಂಚಕರು ಆಡುಗೋಡಿ ಟ್ರಾಫಿಕ್ ಮತ್ತು ಜ್ಞಾನಭಾರತಿ, ಗಿರಿನಗರ ಮತ್ತು ಬಸವನಗುಡಿ ಠಾಣೆ ಸೇರಿದಂತೆ ಕೆಲವು ಠಾಣೆಗಳ ಪೊಲೀಸ್ ಇನ್ಸ್ಪೆಕ್ಟರ್ಗಳ ಅಧಿಕೃತ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಿದ್ದಾರೆ. ಅವರ ಸಹೋದ್ಯೋಗಿಗಳು, ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮತ್ತು ಗುಂಪುಗಳಿಗೆ ಎಪಿಕೆ ಫೈಲ್ ಲಿಂಕ್ಗಳನ್ನು ಕಳುಹಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಲಿಂಕ್ ಡೌನ್ಲೋಡ್ ಮಾಡಿದ ನಂತರ ಹಣವನ್ನು ಕಳೆದುಕೊಂಡ ಬಗ್ಗೆ ಯಾವುದೇ ದೂರು ಅಥವಾ ಮಾಹಿತಿ ಇನ್ನೂ ಬಂದಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ.
ಪೊಲೀಸ್ ಇನ್ಸ್ಪೆಕ್ಟರ್ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಕಳುಹಿಸಿದ ಎಪಿಕೆ ಫೈಲ್ ಸಂದೇಶವನ್ನು ಸ್ವೀಕರಿಸಿದ್ದೇನೆ. ಕುತೂಹಲದಿಂದ ಅದನ್ನು ಕ್ಲಿಕ್ ಮಾಡಿದ್ದೇನೆ. ಆ ಲಿಂಕ್ ಖಾಲಿಯಾಗಿತ್ತು. ನಂತರ, ಅವರ ಫೋನ್ ಮತ್ತು ವಾಟ್ಸ್ಆ್ಯಪ್ ಹ್ಯಾಕ್ ಆಗಿರುವುದು ನನಗೆ ತಿಳಿಯಿತು ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ. ಬಳಿಕ ಆ ಅಧಿಕಾರಿ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಪರಿಶೀಲಿಸಿ ಪಾಸ್ವರ್ಡ್ ಬದಲಾಯಿಸಿದ್ದರು.

ಬೆಳಗಾವಿಯಲ್ಲಿ ವಿಶೇಷ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಇನ್ಸ್ಪೆಕ್ಟರ್ ವಾಟ್ಸ್ಆ್ಯಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಅವರ ಎಲ್ಲಾ ಕಾಂಟ್ಯಾಕ್ಟ್ಗಳು ಮತ್ತು ಗುಂಪುಗಳಿಗೆ ಅವರ ಮೊಬೈಲ್ ಸಂಖ್ಯೆಯನ್ನು ಬಳಸಿ ಸಂದೇಶವನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!