
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸತೀಶ್ ಕಾಲೇಜಿನಿಂದಲೆ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದ, ಇಬ್ಬರು ಪರಸ್ಪರ ಪ್ರೀತಿಸಿ ಒಟ್ಟಿಗೆ ಓಡಾಡಿದ್ರು ಆದ್ರೆ ಇತ್ತೀಚೆಗೆ ಯುವಕನಿಂದ ಇವತ್ತಿಗೆ ದೂರವಾಗಿದ್ಲು, ಇದರಿಂದ ಮನನೊಂದ ಸತೀಶ್ ಕುಮಾರ್ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆನ ಮಾಡಿಕೊಂಡಿದ್ದಾನೆ.

ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹವನ್ನ ಅಂಬೇಡ್ಕರ್ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.





