ಬಂದ್ ! ಬಂದ್ ! ಬಂದ್ ! ಮಾ.22 ರಂದು ಕರ್ನಾಟಕ ಬಂದ್

ವಿವಿಧೆಡೆ ಮುತ್ತಿಗೆ, ಗಡಿಗಳ ಬಂದ್ಗೆ ಮಾ.3ರಿಂದಲೇ ನಿರ್ಧಾರ..!
ಬೆಂಗಳೂರು – ಬೆಳಗಾವಿಯಲ್ಲಿ ಕನ್ನಡದ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ, ಕನ್ನಡಿಗರ ಮೇಲೆ ಎಂಇಎಸ್ ಪುಂಡಾಟ, ಶಿವಸೇನೆ ನಾಯಕರು ಹಾಗೂ ಕಾರ್ಯಕರ್ತರು ಕರ್ನಾಟಕಕ್ಕೆ ಕಾಲಿಡದಂತೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮಾ. 22ರಂದು ಕರ್ನಾಟಕ ಬಂದ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಮಾ.3 ರಿಂದಲೇ ರಾಜಭವನ ಮುತ್ತಿಗೆ, ಮಾ.7 ಬೆಳಗಾವಿ ಚಲೋ ಸೇರಿ ಹಂತ ಹಂತ ವಾಗಿ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಶುಕ್ರ ವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕು. ಶಿವಸೇನೆಗಡಿಪಾರು ಮಾಡ ಬೇಕು. ಸಂಭಾಜಿ ಪ್ರತಿಮೆ ತೆರವುಗೊಳಿ ಸಬೇಕು. ಕಂಡಕ್ಟರ್ ಮೇಲಿನ ಹಲ್ಲೆಗೆ ಉನ್ನತ ಮಟ್ಟದ ತನಿಖೆ ಯಾಗಬೇಕು. ವಾಟಾಳ್ ಕೊಪ್ಪಳ ಕಾರ್ಖಾನೆಗಳಿಂದ ಪರಿಸರ ಹಾಳಾಗುತ್ತಿದ್ದು, ಇದಕ್ಕೆ ತಡೆ ನೀಡಬೇಕು. ಪರ ಭಾಷೆಯವರು ತಮ್ಮದೇ ಭಾಷಾ ವ್ಯಾಮೋಹ ಹೊಂದಿದ್ದರೆ ನಮ್ಮ ರಾಜ್ಯ ದಿಂದ ಹೊರಗಡೆ
ಹೋಗಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮೂಲೆಗುಂಪಾಗಿದ್ದು, ಇದಕ್ಕೆ ಶಕ್ತಿ ತುಂಬಬೇಕು ಎಂದು ಆಗ್ರಹಿಸಿ ಮಾ.22ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಕನ್ನಡ ಒಕ್ಕೂಟದಿಂದ ಹಂತ ಹಂತವಾಗಿ ಪ್ರತಿಭಟನೆ
ಮಾರ್ಚ್ 3 – ಬೆಳಿಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ.
ಮಾರ್ಚ್ 7 – ರಂದು ಬೆಳಗಾವಿ ಚಲೋ.
ಮಾರ್ಚ್ 11 – ಅತ್ತಿಬೆಲೆ ತಮಿಳುನಾಡು ಗಡಿ ಬಂದ್.
ಮಾರ್ಚ್ 14 – ಮಂಡ್ಯ ಮೈಸೂರು, ರಾಮನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮಾರ್ಚ್ 16 – ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಬಂದ್.
ಮಾರ್ಚ್ 22 – ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಅಖಂಡ ಕರ್ನಾಟಕ ಬಂದ್
ಪೂಜಾ ಗಾಂಧಿ ಹಾಡಿಗೆ ಫ್ಯಾನ್ಸ್ ಫುಲ್ ಫಿದಾ..!
ಕರ್ನಾಟಕ ಬಂದ್ಗೆ ಕರೆ ನೀಡಿರುವುದಕ್ಕೆ ಯಾರೊಬ್ಬರೂ ನನ್ನನ್ನು ಕರೆದಿಲ್ಲ ಅಂತ ಮಾತನಾಡಬೇಡಿ. ನಾನು ಪ್ರವೀಣ್ ಶೆಟ್ಟಿ ಅವರನ್ನು ಕರೆದಿದ್ದೆ. ಆದರೆ ಪಾಪ ಅವರು ಎಲ್ಲಿ ಹೋಗಿದ್ದಾರೋ ಗೊತ್ತಿಲ್ಲ. ನಾನು ನಾರಾಯಣಗೌಡರಿಗೂ ಬಹಿರಂಗವಾಗಿ ಕರೆಯುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನಾವು ಕಳಕಳಿಯಿಂದ ಮನವಿ ಮಾಡುತ್ತೇನೆ. ಇದು ರಾಜಕೀಯವಲ್ಲ ಸಂಪೂರ್ಣ ಬೆಂಬಲ ನೀಡಬೇಕು. ರಾಮಲಿಂಗಾರೆಡ್ಡಿ ಅವರು ನಿಮ್ಮ ಇಲಾಖೆಯ ಎಲ್ಲ ಬಸ್ಸುಗಳನ್ನು ನಿಲ್ಲಿಸಿ ಬೆಂಬಲ ಸೂಚಿಸಬೇಕು. ಹೋಟೆಲ್ ಅವರು ಬಂದ್ ಮಾಡಿ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಇರುವ ಶಾಪಿಂಗ್ ಮಾಲ್ಗಳೆಲ್ಲ ಮುಚ್ಚುತ್ತಾರೆ ನಾವು ಮಾತನಾಡಿದ್ದೇವೆ. ಸರ್ಕಾರಿ ನೌಕರರರ ಸಂಘ ಗೌರವದಿಂದ ಹೇಳುತ್ತೇನೆ ಬೆಂಬಲ ನೀಡಿ. ಖಾಸಗಿ ಶಾಲೆ, ಸರ್ಕಾರಿ ಶಾಲೆ ರಜೆ ಘೋಷಣೆ ಮಾಡಿ. ಎಲ್ಲಾ ಐಟಿ ಕಂಪನಿಗಳು ಕೂಡ ರಜೆ ಕೊಡಬೇಕು. ಎಲ್ಲಾ ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರ, ವ್ಯವಹಾರ ನಿಲ್ಲಿಸಬೇಕು. ಉಳಿದಂತೆ ಎಲ್ಲ ಜನಸಾಮಾನ್ಯರು ಇದಕ್ಕೆ ಬೆಂಬಲ ನೀಡಲಿದ್ದಾರೆ ಎಂದು ವಾಟಾಳ್ ನಾಗರಾಜ್ ಹೇಳಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!