ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸುವಂತೆ ಮುಖ್ಯಮಂತ್ರಿ ಅವರಲ್ಲಿ ; ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮನವಿ.

ಮೈಸೂರು: ನಗರ ಮತ್ತು ಹೊರವಲಯದ ಪ್ರದೇಶವು ವರ್ಷದಿಂದ ವರ್ಷಕ್ಕೆ ವಿಸ್ತಾರವಾಗುತ್ತಿರುವ ಪರಿಣಾಮ ಮಹಾನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆುಂಲ್ಲಿ ಬೆಂಗಳೂರಿನಲ್ಲಿ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆುಂಲ್ಲಿ ಭಾಗವಹಿಸಿ ಮಾತನಾಡಿ, ಬೃಹತ್ ನಗರಪಾಲಿಕೆ ಮಾಡುವುದರ ಕುರಿತು ಇರುವ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.
ಕಳೆದ ೩೦ ವರ್ಷಗಳಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ವಾಣಗೊಂಡಿರುವ ಹಾಗೂ ಪ್ರಾಧಿಕಾರದ ಅನುಮೋದನೆೊಂಡನೆ ನಿರ್ವಾಣಗೊಂಡಿರುವ ಖಾಸಗಿ ಬಡಾವಣೆಗಳನ್ನು ಸ್ಥಳೀಯ ಸಂಸ್ಥೆಗಳಾದ ಮೈಸೂರು ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿಗಳು, ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಒಂದೇ ಬಾರಿಗೆ ಖಾತೆ ವಾಡಿ ಹಸ್ತಾಂತರ ವಾಡಲಾಗುತ್ತಿದೆ. ಈ ಬಡಾವಣೆಗಳ ಪರಿಸ್ಥಿತಿ ಹೇಳತೀರದು. ಬಡಾವಣೆಗಳಿಗೆ ಮೂಲ ಸೌಕರ್ಯಗಳು ಇಲ್ಲದೆ ಅಲ್ಲಿನ ನಿವಾಸಿಗಳು ಪರದಾಡುವ ಪರಿಸ್ಥಿತಿ ನಿರ್ವಾಣವಾಗಿದೆ. ಮೂಡಾದಲ್ಲಿ ನಿಧಿ-೧ ಮತ್ತು ನಿಧಿ -೨ ಎಂದು ವಾಡಿವುದೆ ಬಡಾವಣೆಗಳ ಅಭಿವೃದ್ಧಿ ವಾಡಲು ಸಾಧ್ಯವಾಗಿಲ್ಲ, ಆದ್ದರಿಂದ ಇಂತಹ ಬಡಾವಣೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮ ಪಂಚಾಯಿತಿಗಳು, ಪಟ್ಟಣಪಂಚಾಯಿತಿಗಳಲ್ಲಿ ಅನುದಾನವಿಲ್ಲದ ಕಾರಣ ಈ ಬಡಾವಣೆಗಳನ್ನು ಒಂದು ಬಾರಿ ಅಭಿವೃದ್ಧಿಪಡಿಸಲು ಅನುದಾನ ನೀಡುವಂತೆ ಮನವಿಮಾಡಿದರು.ಮೈಸೂರು ನಗರದ ಒಳಚರಂಡಿ ನೀರು ಮಳೆ ನೀರು ಚರಂಡಿ ಮೂಲಕ ನದಿ ಮತ್ತು ಕೆರೆಗಳನ್ನು ಸೇರುತ್ತಿದೆ ಆದ್ದರಿಂದ ಮೈಸೂರು ನಗರಕ್ಕೆ ಹೊಸದಾಗಿ ಒಳಚರಂಡಿ ವ್ಯವಸ್ಥೆುಂನ್ನು ಹಾಗೂ ಎಸ್‌ಬಿಆರ್ ತಾಂತ್ರಿಕತೆಯ ನೀರು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ೬೦೦ಕೋಟಿ ರೂ. ಅನುದಾನದ ಅವಶ್ಯಕತೆ ಇದೆ ಎಂದು ಸಭೆಗೆ ತಿಳಿಸಿದರು.
ವಿಜಯನಗರ ೪ನೇ ಹಂತದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ವಿದ್ಯಾರ್ಥಿ ನಿಲುಂದ ನಿರ್ವಾಣಕ್ಕೆ ರೂ. ೫೦.೦೦ ಕೋಟಿ ಅನುದಾನ ಬಿಡುಗಡೆ ವಾಡುವಂತೆ ಕೋರಿದರು. ಡಿ.ದೇವರಾಜು ಅರಸು ನಾಲೆುಂ ಕೊನೆುಂ ಭಾಗಕ್ಕೆ ಸರಿಾಂದ ಪ್ರವಾಣದಲ್ಲಿ ನೀರು ಹೋಗದೆ ಅಲ್ಲಿನ ರೈತರಿಗೆ ಬಹಳ ತೊಂದರೆಾಂಗುತ್ತಿದೆ ಆದ್ದರಿಂದ ಕೊನೆುಂ ಭಾಗಕ್ಕೆ ನೀರು ಹೋಗಲು ರೂ ೧೪೧ ಕೋಟಿ ಅನುದಾನವನ್ನು ಒದಗಿಸುವಂತೆ ಕೋರಿದರು.
ಮೈಸೂರು ತಾಲ್ಲೂಕಿನ ವ್ಯಾಪ್ತಿುಯ ಸ್ಮಶಾನಗಳ ಒತ್ತುವರಿ, ಕೆರೆಗಳ ಒತ್ತುವರೆ ಹಾಗೂ ನಾಲೆಗಳ ಒತ್ತುವರಿಗೆ ತೆರವುಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆುಂಲ್ಲಿ ಸಮಿತಿ ರಚಿಸುವಂತೆ ಪ್ರಸ್ತಾಪವಿಟ್ಟರು. ಮೈಸೂರು ನಗರದ ಪೊಲೀಸ್ ಸರಹದ್ದನ್ನು ತಾಲ್ಲೂಕಿಗೆ ವಿಸ್ತರಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ವಾಡಿದರು.
ಮೈಸೂರಿನ ಪ್ರವಾಸೋದ್ಯಮದ ದೃಷ್ಠಿಯಿಂದ ಮೈಸೂರು ವಿವಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅವಶ್ಯವಾಗಿರುವ ಮೂಲಸೌಕರ್ಯವನ್ನು ಒದಗಿಸುವಂತೆ ಕೋರಿದರು. ಮೈಸೂರು ವಿವಾನ ನಿಲ್ದಾಣ ಅಭಿವೃದ್ದಿ ಕುರಿತು ಕೇಂದ್ರ ಸರ್ಕಾರದೊಡನೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಹುಯಿಲಾಳು ಹತ್ತಿರ ಕ್ರಿಕೆಟ್ ಸ್ಟೇಡಿುಂಂ ನಿರ್ವಾಣ ಸೇರಿದಂತೆ ಶ್ರೀರಾಂಪುರದಿಂದ ಜುಂಪುರ ವಾರ್ಗ ಹೆಚ್.ಡಿ.ಕೋಟೆ ಸೇರುವ ರಸ್ತೆ ಅಭಿವೃದ್ಧಿ ಕುರಿತು ಚರ್ಚಿಸಿದರು. ಈಗ ಶ್ರೀರಾಂಪುರದಿಂದ ಉದ್ಬೂರು ಗೇಟ್ ವರೆಗೆ ಜೋಡಿ ರಸ್ತೆ ಮಂಜೂರಾಗಿದ್ದು, ಉಳಿದ ರಸ್ತೆುಂನ್ನು ಜೋಡಿ ರಸ್ತೆುಂನ್ನಾಗಿ ನಿರ್ವಾಣ ವಾಡುವಂತೆ ಮನವಿ ವಾಡಿದರು. ಎಚ್.ಡಿ.ಕೋಟೆ ಶಾಸಕ ಅನಿಲ್‌ಕುವಾರ್ ಎಚ್.ಡಿ.ಕೋಟೆವರೆಗೆ ಜೋಡಿ ರಸ್ತೆ ನಿರ್ವಾಣ ವಾಡುವಂತೆ ಕೋರಿದರು. ಎಲ್ಲದಕ್ಕೂ ಸಕರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡಲೇ ಆರ್ಥಿಕ ಇಲಾಖೆ, ನಗರಾಭಿವೃದ್ಧಿ ಇಲಾಖೆೊಂಡನೆ ಸಭೆ ವಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರಲ್ಲದೆ, ಇಲಾಖೆಗಳೊಡನೆ ಚರ್ಚಿಸಿ ಬಜೆಟ್‌ನಲ್ಲಿ ಹಣ ನೀಡುವುದಾಗಿ ತಿಳಿಸಿದರು. ಮೈಸೂರು ನಗರದ ಮುಖ್ಯ ರಸ್ತೆಗಳ ವೈಟ್ ಟ್ಯಾಪಿಂಗ್‌ಗಾಗಿ ೩೫೦ ಕೋಟಿ ನೀಡುವುದಾಗಿ ಹಾಗೂ ದೇವರಾಜ ವಾರುಕಟ್ಟೆ, ಲ್ಯಾನ್ಸ್‌ಡೌನ್ ಬಿಲ್ಡಿಂಗ್ ನಿರ್ವಾಣಕ್ಕೆ ಬಜೆಟ್‌ನಲ್ಲಿ ಹಣ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಮೈಸೂರು ನಗರದ ಅಭಿವೃದ್ಧಿಗೆ ೩೫೦ ಕೋಟಿ ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!