ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ

ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ರೇಪ್ ಆಗಿದೆ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಇದೇ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ ಹತ್ತಿದ್ದ ಯುವತಿಯನ್ನು ಬೊಮ್ಮನಹಳ್ಳಿ ಸಮೀಪದ ಗೋದಾಮು ಬಳಿ ಕರೆದುಕೊಂಡು ಹೋಗಿ ರೇಪ್ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಯುವತಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಸಂತ್ರಸ್ಥೆ ಅರೆ ಪ್ರಜ್ಞಾವಸ್ಥೆಯಲ್ಲಿ‌ ತನ್ನ ಸ್ನೇಹಿತೆಗೆ ಕರೆ ಮಾಡಿದ್ದು ಸ್ನೇಹಿತೆ ಬಂದು ಆಕೆಯನ್ನು ಆಸ್ಪತ್ರೆಗೆ ದಾಖಲು‌ ಮಾಡಿದ್ದಾಳೆ. ಈ ವೇಳೆ ವೈದ್ಯರು ಯುವತಿಯನ್ನು ಪರೀಕ್ಷಿಸಿದಾಗ ಆಕೆಯ ಮೇಲೆ ಅತ್ಯಾಚಾರವಾಗಿರೋದು ಗೊತ್ತಾಗಿದೆ. ಆಸ್ಪತ್ರೆ ಸಿಬ್ಬಂದಿ ತಕ್ಷಣ ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿ‌ ನೀಡಿದ್ದು ಘಟನೆ ಸಂಬಂಧ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇನ್ನು ಯುವತಿ ಬಿದ್ದಿದ್ದ ಸ್ಥಳ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದೆ. ಹೀಗಾಗಿ ಹೆಚ್ಎಸ್ಆರ್ ಲೇಔಟ್ ಗೆ ಹೆಬ್ಬಗೋಡಿ ಪೊಲೀಸರು ಮೆಮೋ ಕಳುಹಿಸಿದ್ದಾರೆ.

  • Related Posts

    ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

    ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

    ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ನಡೆದ ಮೂವರ ಶೂ*ಟೌಟ್ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾವನ್ನಪ್ಪಿದ ಮೂವರೂ ಹವ್ಯಾಸಿ ಬೇಟೆಗಾರರಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ರಜೆಯ ಸಂದರ್ಭದಲ್ಲಿ ಜಿಂಕೆ ಬೇಟೆಗೆ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!