ಬೆಂಗಳೂರಿನ ರಿಕ್ಷಾ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ: ಬೆಂಗಳೂರಿನ ಆರ್ಥಿಕತೆ ನಡೆಯುವುದೇ ನಮ್ಮಿಂದ ಎಂಬ ಅಹಂಕಾರದ ಮಾತುಗಳನ್ನಾಡಿದ್ದಾಳೆ!!

ನಮ್ಮ ರಾಜ್ಯಕ್ಕೆ ಬಂದು ನೆಲೆಸಿರುವ ಉತ್ತರ ಭಾರತೀಯರು ಕನ್ನಡ ಮಾತಾಡಲ್ಲ, ಸೇರಿದಂತೆ ಇನ್ನಿತ್ತರ ವಿಚಾರದಲ್ಲಿ ಕನ್ನಡಿಗರ ಜೊತೆಯಲ್ಲಿ ಜಗಳಕ್ಕೆ ಇಳಿಯುವುದು ಹೊಸದೇನಲ್ಲ. ಈಗಾಗಲೇ ಇಂತಹ ಸಾಕಷ್ಟು ಘಟನೆಗಳು ನಡೆದಿದ್ದು, ಇದೀಗ ಹಿಂದಿ ಮಾತನಾಡುವ ಮಹಿಳೆಯೊಬ್ಬಳು ಆಟೋ ಬಾಡಿಗೆ ವಿಚಾರಕ್ಕೆ ಬೆಂಗಳೂರಿನ ಆಟೋ ಚಾಲಕನ ಜೊತೆಗೆ ಜಗಳಕ್ಕೆ ಇಳಿದಿದ್ದಾಳೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ಮಹಿಳೆಯ ಅತಿರೇಕದ ವರ್ತನೆಗೆ ಬಳಕೆದಾರರು ಗರಂ ಆಗಿದ್ದು ಖಾರವಾಗಿಯೇ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.ವಿವಿಧ ರಾಜ್ಯದಿಂದ ಬಂದು ಕರ್ನಾಟಕ ದಲ್ಲಿ ನೆಲೆಸುವ ಉತ್ತರ ಭಾರತೀಯರು ಕನ್ನಡಿಗರ ಮೇಲೆ ದರ್ಪ ತೋರಿಸುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಕಳೆದ ವಾರವಷ್ಟೇ ಬಿಹಾರ ಮೂಲದ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಬಾರಿಸಿದ ಘಟನೆಯೂ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ಹಿಂದಿ ಮಹಿಳೆಯೂ ಆಟೋ ಚಾಲಕನ ಜೊತೆಗೆ ಕಿರಿಕಿರಿ ಮಾಡಿಕೊಂಡಿದ್ದಾಳೆ.

ಹೌದು, ಬೆಂಗಳೂರಿನ ಆಟೋ ಚಾಲಕ ನ ಜೊತೆಗೆ ಆಟೋ ಚಾರ್ಜ್ ವಿಚಾರವಾಗಿ ಶುರುವಾದ ಜಗಳವು, ಕನ್ನಡದಲ್ಲಿ ಮಾತನಾಡು ಎನ್ನುವ ಹಂತಕ್ಕೆ ಹೋಗಿದೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಮಹಿಳೆಯೊಬ್ಬರು ಆಟೋ ಚಾಲಕನ ಜೊತೆಗೆ ಆಟೋ ಬಾಡಿಗೆ ವಿಚಾರವಾಗಿ ಜಗಳ ಆಡುತ್ತಿರುವುದನ್ನು ಕಾಣಬಹುದು. ಆಟೋ ಹತ್ತುವ ಸಮಯದಲ್ಲಿ 296 ರೂ ತೋರಿಸುತ್ತಿತ್ತು, ಈಗ 390 ರೂ ಆಟೋ ಬಾಡಿಗೆ ಕೇಳ್ತಾ ಇದ್ದೀರಾ ಎಂದು ಪ್ರಶ್ನೆ ಮಾಡಿದ್ದಾಳೆ. ಈ ವೇಳೆಯಲ್ಲಿ ಆಟೋ ಅಪ್ಲಿಕೇಶನ್ ನಲ್ಲಿ ಎಷ್ಟು ತೋರಿಸುತ್ತಿದೆ ನೋಡಿ ಎಂದು ಆಟೋ ಚಾಲಕನು ತೋರಿಸಿದ್ದು, ಆದರೆ ಮಾತಿಗೆ ಮಾತು ಬೆಳೆದು ಈ ಜಗಳವು ಅತಿರೇಕಕ್ಕೆ ತಲುಪಿದೆ. ಆಟೋ ಚಾಲಕನು ಏನೇ ಹೇಳಿದ್ರೂ ಕೂಡ ಕ್ಯಾರೇ ಎನ್ನದೇ ಹಿಂದಿ ಮಹಿಳೆಯೂ ಮಾತನಾಡಿದ್ದಾಳೆ. ಈ ವೇಳೆಯಲ್ಲಿ ಕೋಪಗೊಂಡ ಆಟೋ ಚಾಲಕನು ಕನ್ನಡದಲ್ಲಿ ಮಾತನಾಡು ಎಂದಿದ್ದಾನೆ. ಹೀಗೆನ್ನುತ್ತಿದ್ದಂತೆ ಸಿಟ್ಟಿನಿಂದ ಮಹಿಳೆಯೂ ನಾವು ಬೆಂಗಳೂರಿನ ಆರ್ಥಿಕತೆಗೆ ಕೊಡುಗೆ ನೀಡುತ್ತಿದ್ದೇವೆ, ನಿನಗೇನಾದರೂ ಗೊತ್ತಿದೆಯಾ ಎಂದು ಪ್ರಶ್ನಿಸಿರುವುದನ್ನು ಕಾಣಬಹುದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!