ಬೆಳಗ್ಗೆ SSLC ಪರೀಕ್ಷೆ, ರಾತ್ರಿ ತಂದೆ ಸಾ*ವು ;ದುಃಖದಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ!…..

ನಿನ್ನೆ ರಾತ್ರಿಯೇ ಏಕಾಏಕಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ ತಂದೆ ನೂರಹಸನ.ತಂದೆಯ ಆಸೆ ಈಡೇರಿಸಲು ದುಃಖದಲ್ಲೂ ನಿರ್ಧಾರ ಮಾಡಿದ ವಿದ್ಯಾರ್ಥಿನಿ.ಮಗಳೇ ನಾನೇ ನಿನ್ನನ್ನು ಬೆಳಗ್ಗೆ ಪರೀಕ್ಷೆಗೆ ಬಿಡುವುದಾಗಿ ಹೇಳಿದ್ದರು.ತಂದೆ ಸಾವಿನ ದುಃಖದಲ್ಲೂ ಮಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಮನಕಲಕುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ.

ಶಬಾನಾ ಪಟಾಸು ನವಲಗುಂದ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಶಬಾನಾ ಚೆನ್ನಾಗಿ ಓದಬೇಕು ಅನ್ನೋದು ಶಬಾನಾ ತಂದೆ ನೂರಹಸನ ಅವರ ಆಸೆಯಾಗಿತ್ತು. ಆದರೆ ಕಳೆದ ಗುರುವಾರ ರಾತ್ರಿ ಏಕಾಏಕಿ ಹೊಟ್ಟೆ ನೋವು ಬಂದು ಮೃತಪಟ್ಟಿದ್ದಾರೆ.ಶುಕ್ರವಾರ ಬೆಳಗ್ಗೆ ಮಗಳಿಗೆ SSLC ಪರೀಕ್ಷೆ ಇತ್ತು. ಗುರುವಾರ ರಾತ್ರಿ ತಂದೆ ನೂರಹಸನ ಮಗಳೇ ನಾನೇ ನಿನ್ನನ್ನು ಬೆಳಗ್ಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಬಿಡುವುದಾಗಿ ಹೇಳಿದ್ದರು. ಆದರೆ ಗುರುವಾರ ರಾತ್ರಿಯೇ ವಿದ್ಯಾರ್ಥಿನಿ ತಂದೆ ಪ್ರಾಣ ಬಿಟ್ಟಿದ್ದಾರೆ.ತಂದೆಯ ಸಾವಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಶಬಾನಾ ಪಟಾಸು SSLC ಪರೀಕ್ಷೆಗೆ ಗೈರಾಗುತ್ತಿದ್ದರು. ಇದನ್ನು ತಿಳಿದ ಶಿಕ್ಷಕರು ವಿದ್ಯಾರ್ಥಿನಿಯ ಮನ ಒಲಿಸಿದ್ದಾರೆ. ಶಿಕ್ಷಕರ ಮನವಿ, ತಂದೆಯ ಆಸೆ ಈಡೇರಿಸಲು ನಿರ್ಧರಿಸಿದ ಶಬಾನಾ ಪರೀಕ್ಷೆಗೆ ಹಾಜರಾಗಿದ್ದಾರೆ.
ಈ ವಿಷಯ ತಿಳಿದ ಶಿಕ್ಷಣ ಇಲಾಖೆ ವಿದ್ಯಾರ್ಥಿನಿಗೆ ವಾಹನ ವ್ಯವಸ್ಥೆಯ ಅನುಕೂಲ ಮಾಡಿಕೊಟ್ಟಿದೆ. ತಂದೆಯ ಪ್ರೇರಣೆಯಿಂದಲೇ ಶಾಲೆಗೆ ಬರುತ್ತಿರುವುದಾಗಿ ಹೇಳಿರುವ ವಿದ್ಯಾರ್ಥಿನಿ ದುಃಖದಲ್ಲೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಗಮನ ಸೆಳೆದಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!