ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*.

ದಕ್ಷಿಣ ಕನ್ನಡ : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಾದವರನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಂದೆ – ಮಗ ಹಾಗೂ ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇವರು ತಮ್ಮ ಆಲ್ಟೋ ಕಾರಿನಲ್ಲಿ ಗೊಂದೊಳ್ ಪೂಜೆಗೆ ಪುತ್ತೂರಿನ ಪುಣಚಕ್ಕೆ ಆಗಮಿಸಿದ್ದರು. ಹಿಂತಿರುಗುವ ವೇಳೆ ಮುಂಜಾನೆ 4.15ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಅಣ್ಣು ನಾಯ್ಕ, ಅವರ ಪುತ್ರ ಚಿದಾನಂದ ಹಾಗೂ ನೆರೆಮನೆಯ ರಮೇಶ್ ನಾಯ್ಕ ಮೃತರಾಗಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸ್​​ ಠಾಣೆಯ ಸಬ್​ಇನ್ಸ್​ಪೆಕ್ಟರ್​​ ಉದಯ ರವಿ ಹಾಗೂ ಎಫ್.ಎಸ್.ಐ. ಎಲ್ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!