ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ, ಕಣಕ್ಕಿಳಿಯುತ್ತಿದ್ದಂತೆ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ .

ಭಾರತ ಮತ್ತು ಆಸ್ಟ್ರೇಲಿಯಾ 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವು ಶುರುವಾಗಿದೆ. ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಈ ಮ್ಯಾಚ್ನಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಆರಂಭಿಸಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ.

ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು.
ಅದರಂತೆ ಫೀಲ್ಡಿಂಗ್ಗಾಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 100 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎನಿಸಿಕೊಂಡರು.
ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ನೂರು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಮಾಸ್ಟರ್ ಬ್ಲಾಸ್ಟರ್ ಆಸೀಸ್ ವಿರುದ್ಧ 110 ಪಂದ್ಯಗಳನ್ನಾಡಿ ಈ ದಾಖಲೆ ನಿರ್ಮಿಸಿದ್ದಾರೆ.

ಇದೀಗ ಆಸ್ಟ್ರೇಲಿಯಾ ವಿರುದ್ಧ 100ನೇ ಪಂದ್ಯದಲ್ಲಿ ಕಣಕ್ಕಿಳಿದು, ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಕಿಂಗ್ ಕೊಹ್ಲಿ ಸರಿಗಟ್ಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಂದಹಾಗೆ ಆಸ್ಟ್ರೇಲಿಯಾ ವಿರುದ್ಧ 110 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ 6,707 ರನ್ ಕಲೆಹಾಕಿದರೆ, 100* ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 5,326 ರನ್ ಗಳಿಸಿದ್ದಾರೆ. ಇದೀಗ ಬ್ರಿಸ್ಬೇನ್ನಲ್ಲಿ 100ನೇ ಪಂದ್ಯವಾಡುತ್ತಿರುವ ಕಿಂಗ್ ಕೊಹ್ಲಿ ಕಡೆಯಿಂದ 100ರ ಇನಿಂಗ್ಸ್ ಅನ್ನು ನಿರೀಕ್ಷಿಸಬಹುದು.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ರಾಜೀನಾಮೆ ನೀಡಿದ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬ್ರಿಟಿಷ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು, ಜೀವನ ವೆಚ್ಚ ಏರಿಕೆ ಹಾಗೂ ಪಕ್ಷದೊಳಗಿನ ಒತ್ತಡ ಇದಕ್ಕೆ ಪ್ರಮುಖ ಕಾರಣ. ಆಂಡಿ ಬರ್ನ್‌ಹ್ಯಾಮ್ ಸವಾಲು ಮತ್ತು…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!