ಭರ್ಜರಿ ಶತಕ ಸಿಡಿಸುವ ಮುಖಾಂತರ ಹೊಸ ಇತಿಹಾಸ ಬರೆದ ಸ್ಮೃತಿ ಮಂಧಾನ….

ಭಾರತ, ಶ್ರೀಲಂಕಾ ಮತ್ತು ಸೌತ್ ಆಫ್ರಿಕಾ ನಡುವಣ ತ್ರಿಕೋನ ಸರಣಿಯ ಫೈನಲ್ ಪಂದ್ಯವು ಕೊಲಂಬೊದಲ್ಲಿ ನಡೆಯುತ್ತಿದೆ. ಈ ಸರಣಿಯ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 342 ರನ್ ಕಲೆಹಾಕಿದೆ. ಕೊಲಂಬೊದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಹಾಗೂ ಪ್ರತಿಕಾ ರಾವಲ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 70 ರನ್ ಪೇರಿಸಿದ ಬಳಿಕ ಪ್ರತಿಕಾ 30 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂಧಾನ ಮೈದಾನದ ಮೂಲೆ ಮೂಲೆಗೆ ಫೋರ್ಗಳನ್ನು ಬಾರಿಸಿದರು. ಈ ಮೂಲಕ ಕೇವಲ 92 ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಇದು ಸ್ಮೃತಿ ಮಂಧಾನ ಅವರ 11ನೇ ಏಕದಿನ ಶತಕ. ಈ ಸೆಂಚುರಿಯೊಂದಿಗೆ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವುಮೆನ್ಸ್ ಕ್ರಿಕೆಟ್ನಲ್ಲಿ 10 ಕ್ಕಿಂತ ಅಧಿಕ ಶತಕ ಸಿಡಿಸಿ ಮೊದಲ ಭಾರತೀಯ ಆಟಗಾರ್ತಿ ಹಾಗೂ ವಿಶ್ವದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್. ಮೆಗ್ 103 ಏಕದಿನ ಪಂದ್ಯಗಳಲ್ಲಿ ಒಟ್ಟು 15 ಶತಕ ಸಿಡಿಸಿದ್ದಾರೆ. ಹಾಗೆಯೇ ನ್ಯೂಝಿಲೆಂಡ್ನ ಸುಝಿ ಬೆಟ್ಸ್ 171 ಏಕದಿನ ಪಂದ್ಯಗಳಿಂದ 13 ಶತಕ ಬಾರಿಸಿದ್ದಾರೆ. ಇದೀಗ ಸ್ಮೃತಿ ಮಂಧಾನ 102 ಏಕದಿನ ಪಂದ್ಯಗಳ ಮೂಲಕ ಒಟ್ಟು 11 ಶತಕ ಬಾರಿಸಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಹತ್ತಕ್ಕಿಂತ ಅಧಿಕ ಸೆಂಚುರಿ ಸಿಡಿಸಿದ ವಿಶ್ವದ 3ನೇ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!