ಭಾರತ ಕಂಡ ಪ್ರಾಮಾಣಿಕ ಪ್ರಧಾನಿ ಅವರ ಬದುಕು , ನಮ್ಮೆಗೆಲ್ಲ ಪ್ರೇರಣೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಮನಮೋಹನ್ ಸಿಂಗ್ ಪ್ರಶಂಸಿದ್ದನ್ನು ಸ್ಮರಿಸಿದ ಸಿಎಂ…

ಬೆಳಗಾವಿ :- ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ. ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು.

ದೇಶದ ಬಡತನವಿದ್ದಿದ್ದರಿಂದ, ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಂತರ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಐದು ಕೆಜಿ ಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟನಿವಾರಣೆಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಿದ್ದರು. ಮನಮೋಹನ್ ಸಿಂಗ್ ರವರೊಂದಿಗಿನ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಧಾನಿಯಾಗಿದ್ದಾಗ ಭೇಟಿ ಮಾಡಿದ್ದೂ, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿ, ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!