ಭಾರತ ಹಾಗೂ ಉಳಿದ ತಂಡಗಳಿಗೆ ಚಾಂಪಿಯನ್ ಟ್ರೋಫಿಯಲ್ಲಿ ದೊರೆತ ಹಣವೆಷ್ಟು??

2025ರ ಚಾಂಪಿಯನ್ ಟ್ರೋಫಿಯನ್ನು ಭಾರತವು ತನ್ನದಾಗಿಸಿಕೊಂಡಿದೆ. ದುಬೈನಲ್ಲಿ ನಡೆದ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿ ಟ್ರೋಫಿ ಗೆದ್ದಿದೆ. 60 ಕೋಟಿ ರೂಗಳ ಒಟ್ಟು ಬಹುಮಾನದ ಗಾತ್ರದಲ್ಲಿ ಚಾಂಪಿಯನ್ ಭಾರತಕ್ಕೆ 19.5 ಕೋಟಿ ರೂಪಾಯಿ ಬಹುಮಾನ ದೊರೆತಿದೆ. ಉಳಿದಂತೆ ಬೇರೆ ತಂಡಗಳಿಗೆ ಎಷ್ಟು ಹಣ ದೊರೆತಿದೆ ಎಂಬುದರ ವಿವರ ಇಲ್ಲಿದೆ.

ಚಾಂಪಿಯನ್ ಟ್ರೋಫಿಯ ಫೈನಲ್ಸ್ ನಲ್ಲಿ , ನ್ಯೂಜಿಲೆಂಡ್ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಿದ್ದು, ಭಾರತವು ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಲ್ಲದೆ, ಚಾಂಪಿಯನ್ಸ್ ಕೂಡ ಆಗಿದ್ದಾರೆ. ನಾಯಕ ರೋಹಿತ್ ಶರ್ಮ ಆಡಿದ ಮೌಲ್ಯಯುತ ಇನ್ನಿಂಗ್ಸ್ ಗಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ.
ಈ ಚಾಂಪಿಯನ್ ಟ್ರೋಫಿಯ ವಿಶೇಷ ಏನಪ್ಪಾ ಅಂದ್ರೆ, ಭಾರತ ಆಡಿದ ಯಾವುದೇ ಒಂದು ಪಂದ್ಯಾವಳಿಯನ್ನು ಸಹ ಸೋತಿಲ್ಲ. 2002 ಹಾಗೂ 2013ರಲ್ಲಿಯೂ ಇದೇ ರೀತಿಯಾಗಿ ಪಂದ್ಯವನ್ನ ಆಡಿ ಭಾರತ ಗೆದ್ದಿತ್ತು. ಮತ್ತೊಂದು ಮುಖ್ಯವಾದ ಅಂಶವೆಂದರೆ ಈ ಸಾಧನೆಯನ್ನು ಮಾಡಲು ಯಾವ ದೇಶಗಳಿಗೂ ಸಹ ಸಾಧ್ಯವಾಗಿಲ್ಲ. ಆದರೆ ಭಾರತ ಮೂರು ಬಾರಿ ಐಸಿಸಿ ಟ್ರೋಫಿಯನ್ನು ಗೆಲ್ಲುವುದರ ಮುಖಾಂತರ ಹೊಸ ಇತಿಹಾಸವನ್ನು ಸೃಷ್ಟಿಸಿದೆ.
ಕೇವಲ 9 ತಿಂಗಳುಗಳ ಅಂತರದಲ್ಲಿ ಎರಡನೇ ಐಸಿಸಿ ಟ್ರೋಫಿಯನ್ನು ತನ್ನ ಖಾತೆಗೆ ಹಾಕಿಕೊಂಡಿರುವ ರೋಹಿತ್ ಪಡೆಗೆ ಐಸಿಸಿಯಿಂದ ಭಾರಿ ಮೊತ್ತವನ್ನು ಬಹುಮಾನವನ್ನಾಗಿ ನೀಡಲಾಗಿದೆ. ಚಾಂಪಿಯನ್ ಆಗಿ ಹೊರಹೊಮ್ಮಿರುವ ಭಾರತ ತಂಡಕ್ಕ 2.4 ಮಿಲಿಯನ್ ಅಮೆರಿಕನ್ ಡಾಲರ್ ಅಂದರೆ ಸರಿಸುಮಾರು 19.5 ಕೋಟಿ ರೂ. ಬಹುಮಾನವಾಗಿ ಸಿಗಲಿದೆ. ಹಾಗೆಯೇ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಸೋತ ನ್ಯೂಜಿಲೆಂಡ್ ತಂಡಕ್ಕೆ $1.12 ಮಿಲಿಯನ್ ಅಂದರೆ ಸುಮಾರು 9.72 ಕೋಟಿ ರೂಗಳನ್ನು ಬಹುಮಾನವಾಗಿ ನೀಡಲಾಗುತ್ತದೆ. ಹಾಗೆಯೇ ಸೆಮಿಫೈನಲ್ನಲ್ಲಿ ಹೊರಬಿದ್ದ ಎರಡೂ ತಂಡಗಳಾದ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ 4.86 ಕೋಟಿ ರೂ ಹಣ ಸಿಗಲಿದೆ.

ಸುಮಾರು 60 ಕೋಟಿ ರೂಗಳು ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಗಾತ್ರವಾಗಿದ್ದು, ಚಾಂಪಿಯನ್, ರನ್ನರ್ ಅಪ್ ಹಾಗೂ ಸೆಮಿಫೈನಲ್ನಿಂದ ಹೊರಬಿದ್ದ ತಂಡಗಳನ್ನು ಹೊರತುಪಡಿಸಿ, ಗುಂಪು ಹಂತದಲ್ಲಿ ಪ್ರತಿ ಪಂದ್ಯದ ಗೆಲುವಿಗೆ 30 ಲಕ್ಷ ರೂ. ಬಹುಮಾನ ದೊರೆಯಲಿದೆ.ಟೂರ್ನಿಯಲ್ಲಿ ಐದು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸುಮಾರು 3 ಕೋಟಿ ರೂ. ಬಹುಮಾನ ಪಡೆದರೆ, ಏಳು ಮತ್ತು ಎಂಟನೇ ಸ್ಥಾನ ಪಡೆದ ತಂಡಗಳು ಸುಮಾರು 1.2 ಕೋಟಿ ರೂ ಮೊತ್ತವನ್ನು ಪಡೆಯಲಿದೆ. ಇದಲ್ಲದೆ, ಈ ಐಸಿಸಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲಾ ಎಂಟು ತಂಡಗಳಿಗೆ ತಲಾ 1.08 ಕೋಟಿ ರೂ ಹಣ ಸಿಗಲಿದೆ. ಈ ರೀತಿಯಾಗಿ 60 ಕೋಟಿ ರೂಪಾಯಿಗಳನ್ನು ಭಾಗಿಸಿ, ಎಲ್ಲಾ ತಂಡಗಳಿಗೂ ಸೇರುವಂತೆ ಮಾಡಿದ್ದಾರೆ. ಟ್ರೋಫಿಯನ್ನು ಗೆದ್ದ ತಂಡ ಹಾಗೂ ರನ್ನರ್ ಅಪ್ ಆದ ತಂಡಗಳಿಗೆ ಇತರ ತಂಡಗಳಿಗೆ ಹೋಲಿಸಿದರೆ ಹೆಚ್ಚಿನ ಮೊತ್ತ ದೊರಕಿದೆ.

 

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!