ಮಕ್ಕಳನ್ನು ದತ್ತು ಪಡೆದು ಲೈಂಗಿಕವಾಗಿ ದುರುಪಯೋಗ : ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ;

ಜಾರ್ಜಿಯಾದ ನ್ಯಾಯಾಲಯವೊಂದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಒಂದು ಸಲಿಂಗ ದಂಪತಿಗೆ 100 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ದಂಪತಿ ದತ್ತು ಪಡೆದ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅಶ್ಲೀಲ ವಿಡಿಯೋಗಳನ್ನು ಮಾಡಿ ಮಾರಾಟ ಮಾಡಿದ್ದರು. ಈ ಘಟನೆಯು ‘ಹೌಸ್ ಆಫ್ ಹಾರರ್’ ಎಂದು ನ್ಯಾಯಾಲಯ ಬಣ್ಣಿಸಿದ್ದು, ಜೊತೆಗೆ ದತ್ತು ಪಡೆಯುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಜಾಗೃತೆ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ಅಮೆರಿಕದ ಜಾರ್ಜಿಯಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅಪರಾಧದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಧೀಶರು ಅವರಿಗೆ ಪೆರೋಲ್ ನೀಡಲಾಗುವುದಿಲ್ಲ ಎಂದು ಹೇಳಿದ್ದರಿಂದ ಇಬ್ಬರೂ ಈಗ ತಮ್ಮ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಬೇಕಾಗಿದೆ.

34 ವರ್ಷದ ವಿಲಿಯಂ ಮತ್ತು 36 ವರ್ಷದ ಜಕಾರಿ ಜುಲಾಕ್ ಎಂಬ ಸಲಿಂಗಕಾಮಿಗಳು ಇತ್ತೀಚಿಗಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ವರ್ಷಗಳ ಬಳಿಕ ಈ ಜೋಡಿ 12 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದು, ಈ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಅಪರಾಧಿಗಳು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸ್ನೇಹಿತರಿಗೆ ಮಾರಾಟ ಮಾಡಿದ್ದಾರೆ.
ವಾಲ್ಟನ್ ಕೌಂಟಿ ಪೊಲೀಸರು ಸಲಿಂಗಕಾಮಿ ದಂಪತಿಗಳ ಮನೆಯ ಮೇಲೆ ದಾಳಿ ನಡೆಸಿದ್ದು, ತನಿಖೆಯ ವೇಳೆ ಕಂಡುಬಂದ ದೃಶ್ಯಗಳನ್ನು ನೋಡಿ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ವರದಿಯ ಪ್ರಕಾರ, ಪೊಲೀಸರು ಸಲಿಂಗಕಾಮಿ ದಂಪತಿಗಳ ಮನೆಯಿಂದ 7TB ಗಿಂತ ಹೆಚ್ಚಿನ ಡಿಜಿಟಲ್ ಡೇಟಾ ಮತ್ತು ಗ್ರಾಫಿಕ್ ಫೋಟೋಗಳು ಮತ್ತು ಅಶ್ಲೀಲ ವೀಡಿಯೊಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್ಮುಂದೆ ನಿರ್ಗತಿಕ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಮುಂದೆ ಬರುವ ಜನರ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕು ಎಂದು ನ್ಯಾಯಲಯ ಎಚ್ಚರಿಕೆ ನೀಡಿದೆ. ಇಬ್ಬರು ಅನಾಥ ಮಕ್ಕಳನ್ನು ಈ ರೀತಿ ಬಳಸಿಕೊಂಡ ಸಲಿಂಗಕಾಮಿ ದಂಪತಿಗಳ ಮನೆಯನ್ನು ‘ಹೌಸ್ ಆಫ್ ಹಾರರ್’ ಎಂದು ಬಣ್ಣಿಸಿದ ನ್ಯಾಯಾಲಯ, ಈ ದಂಪತಿಗೆ 100 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!