ಮನಮೋಹನ್ ಸಿಂಗ್ ಅವರ ಸಹಿ ಹಳೇಯ ನೋಟುಗಳಲ್ಲಿ ಕಾಣಬಹುದು..!!!

ದೇಶದ ಅತ್ಯಂತ ಮೇಧಾವಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ರಾಷ್ಟ್ರ ಕಂಬನಿ ಮಿಡಿಯುತ್ತಿದೆ. ಎರಡು ಬಾರಿ ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಯೋಜನೆಗಳು ಇಂದಿಗೂ ಮುಂದುವರೆದಿವೆ. ತಮ್ಮ ಆಡಳಿತಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಮನಮೋಹನ್ ಸಿಂಗ್ ತಂದಿದ್ದಾರೆ.
ಮನಮೋಹನ್ ಸಿಂಗ್ ಆರ್ಥಿಕ ಸಚಿವರಾಗಿಯೂ ದೇಶದಲ್ಲಿ ಅರ್ಥಕ್ರಾಂತಿಯನ್ನೇ ಸೃಷ್ಟಿಸಿದ್ದರು. ದಿವಾಳಿಯಂಚಿನಲ್ಲಿದ್ದ ದೇಶವನ್ನು ಜಗ್ಗತ್ತಿನಲ್ಲಿ ಎರಡನೇ ಅಭಿವೃದ್ಧಿ ಹೊಂದಿತ್ತಿರುವ ರಾಷ್ಟ್ರವನ್ನಾಗಿಸಿದ ಕೀರ್ತಿ ಮನಮೋಹನ್ ಸಿಂಗ್ಗೆ ಸಲ್ಲುತ್ತದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಸಹಿ ಹಳೇಯ ನೋಟುಗಳಲ್ಲಿ ಕಾಣಬಹುದು.

ದೇಶದ ರೂಪಾಯಿಗೆ ಸಹಿ ಹಾಕುವ ಹಕ್ಕು ಕೇವಲ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ಗೆ ಮಾತ್ರ ಇರುತ್ತದೆ. ಭಾರತದಲ್ಲಿ ಪ್ರಚಲಿತದಲ್ಲಿರುವ ಪ್ರತಿಯೊಂದು ನೋಟುಗಳ ಮೇಲೆ ರಿಸರ್ವ್ ಬ್ಯಾಂಕ್ ಗವರ್ನರ್ ಅವರ ಸಹಿ ಇದೆ. ಹಾಗಿದ್ದರೆ.

ಮನಮೋಹನ್ ಸಿಂಗ್ ಪ್ರಧಾನಿ, ಹಣಕಾಸು ಸಚಿವರಾಗುವ ಮುನ್ನ ಮನಮೋಹನ್ ಸಿಂಗ್ ಅವರು ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಅಂದರೆ 1982ರಲ್ಲಿ ಆರ್ಬಿಐ ಗವರ್ನರ್ ಹುದ್ದೆಗೇರಿದರು. 1982 ರಿಂದ 1985ರವರೆಗೆ ಮನಹೋನ್ ಸಿಂಗ್ ಆರ್ಬಿಐ ಗವರ್ನರ್ ಆಗಿದ್ದರು. ಈ ಕಾಲಾವಧಿಯಲ್ಲಿ ಮುದ್ರಿತವಾದ ನೋಟುಗಳ ಮೇಲೆ ಮನಹೋನ್ ಸಿಂಗ್ ಸಹಿ ಇದೆ.
ಮನಮೋಹನ್ ಸಿಂಗ್ ಪಂಜಾಬ್ ವಿವಿಗೆ ಪ್ರವೇಶ ಪಡೆದು, 1952 ಮತ್ತು 1954ರಲ್ಲಿ ಕ್ರಮವಾಗಿ ಅರ್ಥಶಾಸ್ತ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದುಕೊಂಡರು. ಬಳಿಕ ಉನ್ನತ ವ್ಯಾಸಂಗಕ್ಕಾಗಿ ಬ್ರಿಟನ್ಗೆ ತೆರಳಿ ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪದವಿ ಪಡೆದರು. ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಡಿಫಿಲ್ (ಡಾಕ್ಟರ್ ಆಫ್ ಫಿಲಾಸಫಿ)ಯನ್ನು ಪೂರೈಸಿದರು.

ಮನಮೋಹನ್ ಸಿಂಗ್ 1990 ರಿಂದ 1991 ರವರೆಗೆ ಪ್ರಧಾನ ಮಂತ್ರಿಗಳ ಹಣಕಾಸು ಸಲಹೆಗಾರರಾಗಿದ್ದರು. 1991ರಲ್ಲಿ ಹಣಕಾಸು ಸಚಿವರಾಗುವವರೆಗೆ ಯುಜಿಸಿಗೆ ಮೂರು ತಿಂಗಳ ಕಾಲ ಅಧ್ಯಕ್ಷರಾಗಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!