ಮಹಿಳಾ ಕ್ರಿಕೆಟ್ ಗೆ ವರದಾನ ; ಸ್ಮೃತಿ ಮಂಧಾನ : ಒಂದೇ ಪಂದ್ಯದಲ್ಲಿ ಹಲವಾರು ದಾಖಲೆಗಳು ಉಡೀಸ್….

ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಇನಿಂಗ್ಸ್ ಆರಂಭಿಸಿದ ಸ್ಮೃತಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆಂಗ್ಲ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಟೀಮ್ ಇಂಡಿಯಾ ನಾಯಕಿ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್ಗಳನ್ನು ಬಾರಿಸಿದರು. ಈ ಮೂಲಕ 62 ಎಸೆತಗಳಲ್ಲಿ 15 ಫೋರ್ ಹಾಗೂ 3 ಸಿಕ್ಸ್ಗಳೊಂದಿಗೆ 112 ರನ್ ಕಲೆಹಾಕಿದ್ದಾರೆ. ಈ ಶತಕದೊಂದಿಗೆ ಸ್ಮೃತಿ ಮಂಧಾನ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ…

ಸೆಂಚುರಿ ಸರದಾರಿಣಿ: ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ ಶತಕ ಬಾರಿಸಿದ ಏಕೈಕ ಮಹಿಳಾ ಬ್ಯಾಟರ್ ಎಂಬ ದಾಖಲೆಯನ್ನು ಸ್ಮೃತಿ ನಿರ್ಮಿಸಿದ್ದಾರೆ. ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಭಾರತದ ಪರ ಯಾವುದೇ ಮಹಿಳಾ ಬ್ಯಾಟರ್ ಮೂರೂ ಸ್ವರೂಪಗಳಲ್ಲಿ ಸೆಂಚುರಿ ಬಾರಿಸಿಲ್ಲ.

ಭರ್ಜರಿ ಸೆಂಚುರಿ: ಟೀಮ್ ಇಂಡಿಯಾ ಪರ ಮಹಿಳಾ ಕ್ರಿಕೆಟ್ನಲ್ಲಿ ಟಿ20 ಶತಕ ಸಿಡಿಸಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಹರ್ಮನ್ಪ್ರೀತ್ ಕೌರ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು.

ಗರಿಷ್ಠ ಸ್ಕೋರ್: ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಗರಿಷ್ಠ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಹರ್ಮನ್ಪ್ರೀತ್ ಕೌರ್ ಹೆಸರಿನಲ್ಲಿತ್ತು. 2018 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಹರ್ಮನ್ಪ್ರೀತ್ 103 ರನ್ ಬಾರಿಸಿದ್ದರು. ಇದೀಗ 112 ರನ್ಗಳೊಂದಿಗೆ ಸ್ಮೃತಿ ಮಂಧಾನ ಈ ದಾಖಲೆ ಮುರಿದಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!