ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ ಕಿರೀಟ ಮುಡಿಗೇರಿಸಿಕೊಂಡ ಮದ್ದೂರಿನ ಸೊಸೆ ಡಾ. ಪ್ರಿಯಾ ಗೋಸ್ವಾಮಿ.

ನವದೆಹಲಿ :- ಮಂಡ್ಯ ಜಿಲ್ಲೆ ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ಅವರು ಮಿಸೆಸ್ ಇಂಡಿಯಾ ಆಫ್ ನೇಷನ್-2024 ಎಂಚಾಟಿಂಗ್ ವಿಭಾಗದ ಕಿರೀಟವನ್ನು ಗೆದ್ದಿದ್ದಾರೆ. ಪಶು ವೈದ್ಯೆಯಾಗಿರುವ ಇವರು ಭಾರತೀಯ ಸೇನೆಯ ಕರ್ನಲ್ ಸಂಜೀತ್ ಅವರ ಪತ್ನಿ, ಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ ನಡೆದ ಸೌಂದರ್ಯ ಸ್ಪರ್ಧೆ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024 ಕಿರೀಟವು ಕನ್ನಡತಿ ಡಾ.ಪ್ರಿಯಾ ಗೋಸ್ವಾಮಿಗೆ ಒಲಿದು ಬಂದಿದೆ.
ನವದೆಹಲಿಯಲ್ಲಿ ಐದು ದಿನಗಳು ನಡೆದ ಅಂತಿಮ ಸುತ್ತಿನಲ್ಲಿ ಕರ್ನಾ ಟಕದ ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ಅವರು ಎಂಚಾಟಿಂಗ್ ವಿಭಾಗದ ಕಿರೀಟ ಗೆದ್ದು ಬೀಗಿದ್ದಾರೆ. ಜೊತೆಗೆ ಅದೇ ವೇದಿಕೆಯಲ್ಲಿ ಸೋಷಿ ಯಲ್ ಇನ್ನುಯೆನ್ಸರ್ ಗೌರವಕ್ಕೂ ಪಾತ್ರ ರಾಗಿದ್ದಾರೆ. ವೃತ್ತಿಯಿಂದ ಪಶುವೈದ್ಯರಾದ ಡಾ ಪ್ರಿಯಾ ಗೋಸ್ವಾಮಿ, ಮೂಲತಃ ಪಂಜಾಬಿಯಾದರೂ ಗೋವಾದಲ್ಲಿ ಬೆಳೆ ದವರು. ಕಳೆದ ಎರಡು ದಶಕಗಳಿಂದ ಮದ್ದೂರಿನ ನಿವಾಸಿಯಾಗಿ ಕನ್ನಡತಿಯಾಗಿ ದ್ದಾರೆ.
ಭಾರತೀಯ ಸೇನೆಯಲ್ಲಿರುವ ಇವರ ಪತಿ ಕರ್ನಲ್ ಸಂಜೀತ್ ಮಂಡ್ಯ ಜಿಲ್ಲೆಯ ಮದ್ದೂರಿನವರು. ಮದ್ದೂರಿನ ಎಚ್.ಕೆ. ವೀರಣ್ಣಗೌಡ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಬಿ.ಸಿದ್ದೇಗೌಡ ಅವರ ಪುತ್ರರಾದ ಕರ್ನಲ್ ಸಂಜೀತ್, ಪ್ರಸ್ತುತ ಉತ್ತರಖಾಂಡ್‌ನಲ್ಲಿ ಭಾರತೀಯ ಸೇನೆಯ ಕುದುರೆ ತರಬೇತಿ ವಿಭಾಗದ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದಾರೆ. ಪಶುವೈದ್ಯರಾಗಿರುವ ಡಾ.ಪ್ರಿಯಾ
ಕೂಡ ಭಾರತೀಯ ಸೇನೆಯ ಕೆಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿ ದ್ದಾರೆ. 16 ವರ್ಷದ ಮಗಳು ಧ್ರುವಿ ಸಂಜಿತ್ ಹಾಗೂ 9 ವರ್ಷದ ಮಗ ಶೌರ್ಯಗೌಡ, ಮಾವ ಸಿದ್ದೇಗೌಡ, ಅತ್ತೆ ಸುಮಿತ್ರಮ್ಮ ಅವರ ಸಹಕಾರ ಹಾಗೂ ಪತಿ ಕರ್ನಲ್ ಸಂಜಿತ್, ನಾದಿನಿ ಸುಪ್ರೀತಾ ಅವರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣ ಎಂದು ಡಾ.ಪ್ರಿಯಾ ಗೋಸ್ವಾಮಿ ಸಂತಸ ಹಂಚಿಕೊಂಡಿ ದ್ದಾರೆ. ಈ ಕಾರ್ಯಕ್ರಮದ ನಿರ್ದೇಶಕ ರಾದ ಭಾರ್ಕಾ ನಂಗಿಯಾ ಮತ್ತು ಅಭಿಷೇಕ್ ಅವರ ಸಲಹೆಗಳೇ ಗೆಲುವಿಗೆ ದಾರಿ ತೋರಿಸಿದವು ಎಂದು ಸ್ಮರಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!