ಮೈಸೂರು: ಉದ್ಬೂರ್ ಗೇಟ್ ಬಲಿ ಇರುವ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿಷ್ಣುವರ್ಧನ್ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಮಾಳಾರ್ಪಣೆ ಮಾಡಿ ನಂತರ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ಬಳಗದ ವಿಷ್ಣುವರ್ಧನ್ ರವರ ಕೋಟಿಗೊಬ್ಬ 2025 ರ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ ರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಂತರ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು 60ಕ್ಕೂ ಹೆಚ್ಚು ಜನ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು ಬಲಿಕ ಅಭಿಮಾನಿಗಳಿಗೆ ಅನ್ನ ಸಂತರ್ಪನಿಗೆ ಚಾಲನೆ ನೀಡಿದರು

ಇದೇ ಸಂದರ್ಭದಲ್ಲಿ ವಿಷ್ಣು ಅಭಿಮಾನಿಗಳ ಸಂಘದ ಒಕ್ಕೂಟದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ, ಆಲ್ವಿನ್, ಸಮಾಜ ಸೇವಕರಾದ ವಿಕ್ರಂ ಅಯ್ಯಂಗಾರ್, ಎಂ ಎನ್ ಚೇತನ್ ಗೌಡ, ಲಕ್ಷ್ಮಣ, ಮಹದೇವ್, ಜೀವದಾರ ರಕ್ತ ನಿಧಿ ಕೇಂದ್ರದ ಸಿಬ್ಬಂದಿಗಳಾದ ಸುರೇಶ್, ಪ್ರಭು, ಸಂತೋಷ್ ,ಸಿದ್ದಪ್ಪ, ಬಸವರಾಜು, ಹಾಗೂ ಇನ್ನಿತರರು ಹಾಜರಿದ್ದರು.