ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ ಮಾಹಿತಿ.

ಬೆಂಗಳೂರು : ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸಂಚಾರದ ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ.

ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!