ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ ಹೈಕೋರ್ಟ್.

ಮೈಸೂರು, ಫೆಬ್ರವರಿ 24: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ಸಂಬಂಧ ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಪ್ರತಿಭಟನೆಗೆ ಅವಕಾಶ ಕೋರಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿ ಪೊಲೀಸರಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಮಿತಿಯು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಪ್ರತಿಭಟನೆಗೆ ಅವಕಾಶ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಜತೆಗೆ, 1 ಲಕ್ಷ ರೂಪಾಯಿ ಬಾಂಡ್ ನೀಡಲು ಆಯೋಜಕರಿಗೆ ನಿರ್ದೇಶನ ನೀಡಿದೆ.

ಹೈಕೋರ್ಟ್ ಷರತ್ತುಗಳೇನು?
1 ಲಕ್ಷ ರೂಪಾಯಿ ಬಾಂಡ್ ನೀಡಬೇಕು. ಪ್ರತಿಭಟನೆ ಶಾಂತಿಯುತವಾಗಿರಬೇಕು ಹಾಗೂ ಸಂಪೂರ್ಣ ಚಿತ್ರೀಕರಣ ಮಾಡಬೇಕು. ಶಾಂತಿಭಂಗವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಅಹಿತಕರ ಘಟನೆಯಾದರೆ ಅರ್ಜಿದಾರರನ್ನೇ ಹೊಣೆ ಮಾಡಲಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಸಂಜೆ 3.30 ರಿಂದ ಪ್ರತಿಭಟನೆ ನಡೆಸಲು ಅವಕಾಶ ನೀಡಲು ಸೂಚನೆ ಮೈಸೂರಿನ ಪೊಲೀಸ್ ಆಯುಕ್ತರಿಗೆ ನ್ಯಾ.ಆರ್. ದೇವದಾಸ್ ಅವರಿದ್ದ ಪೀಠ ಸೂಚನೆ ನೀಡಿದೆ.
40 ಸಾವಿರ ಕೋಟಿ ಸಾಲದ ಹೊರೆ ಹೊರಿಸಿದ್ದಾರೆ!
ಸರ್ಕಾರದ ಪರ ವಕೀಲರ ವಾದ?
ಪ್ರತಿಭಟನೆಗೆ ಅವಕಾಶ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಬಹುದು. 8 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ, 9 ಮಂದಿ ಪೊಲೀಸರಿಗೆ ಗಾಯವಾಗಿದೆ. ಬೇರೆ ಸಂಘಟನೆಗಳು ಧರಣಿ ನಡೆಸಲು ಅನುಮತಿ ಕೋರಿದ್ದರು, ನೀಡಿಲ್ಲ. ಸೂಕ್ಷ್ಮತೆ ಪರಿಗಣಿಸಿ ಪ್ರತಿಭಟನೆ ನಿರ್ಬಂಧಿಸಿ ನಿಷೇಧಾಜ್ಞೆ ಹೇರಲಾಗಿದೆ ಎಂದು ಸರ್ಕಾರದ ಪರ ಹೆಚ್ಚುವರಿ ಎಜಿ ಭಾನು ಪ್ರಕಾಶ್ ಹೈಕೋರ್ಟ್ಗೆ ತಿಳಿಸಿದರು. ಜತೆಗೆ, ಫುಟ್ಬಾಲ್ ಮೈದಾನ, ಮಹಾರಾಜ ಕಾಲೇಜ್ ಗ್ರೌಂಡ್ನಲ್ಲಿ ಅವಕಾಶ ನೀಡಬಹುದು, ಆದರೆ 300ಕ್ಕಿಂತ ಹೆಚ್ಚಿನ ಜನರಿಗೆ ಅವಕಾಶ ನೀಡದಂತೆ ಮನವಿ ಮಾಡಿದರು.
ಅರ್ಜಿದಾರರ ವಾದ?
ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿಯ ರಿಟ್ ಅರ್ಜಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಪ್ರತಿಭಟನೆಗೆ ಅನುಮತಿ ನೀಡಲು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಏನಾದರೂ ಅಹಿತಕರ ಘಟನೆ ನಡೆದರೆ ಯಾರು ಹೊಣೆ? ರಸ್ತೆ ಬಿಟ್ಟು ಬೇರೆ ಮೈದಾನದಲ್ಲಿ ಪ್ರತಿಭಟನೆ ನಡೆಸಿದರೆ ಪರಿಗಣಿಸುವುದಾಗಿ ತಿಳಿಸಿತು. ನಂತರ ಸೂಕ್ತ ಸ್ಥಳ ತಿಳಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಕೆಲಕಾಲ ಮುಂದೂಡಿತು. ನಂತರ ಸರ್ಕಾರದ ಪರ ವಕೀಲರ ವಾದ ಆಲಿಸಿ, ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!