ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ ಹಕ್ಕಿಜ್ವರ ಹರ ಡುವಿಕೆ ತಡೆಗೆ ಸೂಕ್ತ ಕ್ರಮ ಕೈಗೊಂಡಿದೆ. ಪ್ರತಿ ವರ್ಷದಂತೆ ಕೇರಳದಲ್ಲಿ ಹಕ್ಕಿಜ್ವರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ಕೋಳಿ ಸಾಗಾಣಿಕೆ ವಾಹನಗಳ ತಪಾ ಸಣೆ ನಡೆಸಲಾಗುತ್ತಿದೆ. ಈಗಾಗಲೇ ಪಶು ಸಂಗೋಪನಾ ಇಲಾಖೆ ಜಾಗೃತ ತಂಡ ರಚಿಸಿದ್ದು, ಕೋಳಿ ಸಾಕಣೆದಾರರಿಗೆ ಅರಿವು ಮೂಡಿಸುತ್ತಿದೆ. ಎಲ್ಲಾ ಕೋಳಿ ಸಾಕಣೆ ಕೇಂದ್ರಗಳು, ರೈತರ ಮನೆಗಳು, ಗ್ರಾಮಗಳಿಗೆ ಭೇಟಿ ನೀಡಿ ಕರಪತ್ರ ಹಂಚಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ.

ಯಾವುದೇ ಪಕ್ಷಿ ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರು ವುದು ಗಮನಕ್ಕೆ ಬಂದರೆ ಪಶುಸಂಗೋ ಪನಾ ಇಲಾಖೆಯ ಗಮನಕ್ಕೆ ತರುವಂತೆ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಕೋಳಿ ಸಾಕಣೆ ಕೇಂದ್ರ ಮತ್ತು ಮಾಂಸ ಸಂಸ್ಕ ರಣೆ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹಕ್ಕಿಜ್ವರದ ಸೋಂಕು ತಗಲುವ ಸಾಧ್ಯತೆ ಇರುವುದರಿಂದ ಜಾಗೃತರಾಗಿರುವಂತೆ ತಿಳಿಸಲಾಗುತ್ತಿದೆ. ಕೋಳಿ ಸಾಗಣೆ ಮಾಡುವ
ವಾಹನಗಳಿಗೆ ಔಷಧಿ ಸಿಂಪಡಿಸಿ ಶುಚಿಗೊಳಿಸಲು ಸೂಚನೆ ನೀಡಲಾಗಿದೆ.
ರೋಗದ ಲಕ್ಷಣಗಳು: ಮನುಷ್ಯರಲ್ಲಿ ಸಾಮಾನ್ಯ ಜ್ವರದ ಲಕ್ಷಣ ಕಾಣಿಸಿಕೊಳ್ಳುತ್ತವೆ. ತೀವ್ರ ಜ್ವರ, ಭೇದಿ, ಹೊಟ್ಟೆನೋವು, ಮೂಗು, ವಸಡಿನಲ್ಲಿ ರಕ್ತ ಸ್ರಾವ, ಚಳಿಯ ಅನುಭವ, ತಲೆ ನೋವು, ಮೈ-ಕೈ ನೋವು, ಕೆಮ್ಮು, ಉಸಿರಾಟ ತೊಂದರೆ, ಗಂಟಲು ನೋವು, ಕೆಂಗಣ್ಣು ಬಾಧಿಸುತ್ತದೆ. ಈ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು.
ಕೋಳಿಗಳಲ್ಲಿ ಸೋಂಕಿನ ಲಕ್ಷಣಗಳು ತಕ್ಷಣಕ್ಕೆ ಕಾಣಿಸಿಕೊಳ್ಳುವುದಿಲ್ಲ. ಅವು ಬಹು ಬೇಗ ಹರಡುವುದರಿಂದ ರೋಗ ಪತ್ತೆ ಕಷ್ಟ ಸಾಮಾನ್ಯವಾಗಿ ಸೋಂಕಿತ ಕೋಳಿಗಳು ಆಹಾರ ತಿನ್ನುವುದಿಲ್ಲ. ಮೊಟ್ಟೆ ಉತ್ಪಾದನೆ ಕಡಿಮೆಯಾಗುತ್ತದೆ. ಹೆಚ್ಚು ಓಡಾಡು ವುದಿಲ್ಲ. ಕಣ್ಣುಗಳು ತೇವಗೊಂಡಿರುತ್ತವೆ. ರೆಕ್ಕೆಗಳು ಕೆದರಿರುತ್ತವೆ. ತಲೆ ಭಾಗ ಊದಿ ಕೊಳ್ಳುತ್ತದೆ. ಕಾಲಿನ ಚರ್ಮದ ಅಡಿಯಲ್ಲಿ ರಕ್ತಸ್ರಾವವೂ ಕಾಣಿಸಿಕೊಳ್ಳಬಹುದು. ದಿಢೀರ್ ಸಾವು ಸಂಭವಿಸುತ್ತದೆ.

ಹಕ್ಕಿ ಜ್ವರ ಹೇಗೆ ಹರಡುತ್ತದೆ: ಹಕ್ಕಿ ಜ್ವರದ ವೈರಸ್ ಪಕ್ಷಿಗಳಿಂದ ಪಕ್ಷಿಗಳಿಗೆ ಹರಡುತ್ತದೆ. ಪಕ್ಷಿಗಳು ವಲಸೆ ಹೋದಾಗ, ಗುಂಪಿನಲ್ಲಿ ಸೋಂಕಿತ ಪಕ್ಷಿ ಇದ್ದರೆ ಹೋದ ಸ್ಥಳದಲ್ಲಿರುವ ಎಲ್ಲಾ ಪಕ್ಷಿಗಳಿಗೂ ಸುಲಭವಾಗಿ ಹರಡುತ್ತದೆ. ಸೋಂಕಿತ ಕೋಳಿ ಅಥವಾ ಪಕ್ಷಿಗಳೊಂದಿಗೆ ನೇರ ಸಂಪರ್ಕಕ್ಕೆ ಬಂದ ಜನರು ಮತ್ತು ಪ್ರಾಣಿಗಳಿಗೂ ಸೋಂಕು ಹರಡುವ ಸಾಧ್ಯತೆ ಇದೆ. ಈ ವೈರಸ್ ತೇವ ಅಥವಾ ಒಣಗಿದ ಗೊಬ್ಬರದಲ್ಲಿ 8 ವಾರಗಳ ವರೆಗೂ ಜೀವಿಸುವ ಸಾಮರ್ಥ್ಯ ಹೊಂದಿದೆ. ಸೋಂಕಿತ ಪಕ್ಷಿ, ಪ್ರಾಣಿಗಳ ನೇರ ಸಂಪರ್ಕಕ್ಕೆ ಬಂದರೆ, ಕೈಯನ್ನು ಸಾಬೂನಿ ನಿಂದ ತೊಳೆದು ಸ್ವಚ್ಛಗೊಳಿಸುವುದರ ಮೂಲಕ ಈ ವೈರಸ್ ಮನುಷ್ಯನಿಗೆ ಹರಡುವುದನ್ನು ತಡೆಯಬಹುದು.





