ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ.

ಹುಬ್ಬಳ್ಳಿ :- ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಹೊರಟ್ಟಿ, ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ. 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ಅದನ್ನ(ರಾಜೀನಾಮೆ) ಅಲ್ಲಿಗೆ ಕೈ ಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಅನ್ ಸೈನಡ್ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ . 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ಅದನ್ನ ಅಲ್ಲಿಗೆ ಕೈ ಬಿಟ್ಟಿದ್ದೇನೆ. ಬೆಂಗಳೂರಲ್ಲಿ ಸಭೆ ಮಾಡೋದಾಗಿ ಅಂದು ಕೊಂಡಿದ್ದೇವೆ. ಎಲ್ಲರೂ ಸಹ ನೀವೇ ರಾಜೀನಾಮೆ ಕೊಡಬೇಡಿ ಎಂದು ಹೇಳುತ್ತಿದ್ದಾರೆ. ನಾನು ಮಾಡಿದ ತೀರ್ಮಾನಕ್ಕೆ ವಿರೋಧ ಬಂತು . ನಮ್ಮ ಶಾಸನ ಸಭೆ ಸದಸ್ಯರು ನೋಡೋಣ ರಾಜೀನಾಮೆ ಬೇಡ ಎಂದಿದ್ದಾರೆ. ಪುಟ್ಟಣ್ಣ ಕರೆ ಮಾಡಿ ರಾಜೀನಾಮೆ ವಿಷಯದಲ್ಲಿ ಮುಂದುವರಿಬೇಡಿ ಅಂದ್ರು. ಸಾರ್ವಜನಿಕ ವಲಯದಲ್ಲಿ ನನಗೆ ಇಷ್ಟೊಂದು ಗೌರವ ಕೊಡುತ್ತಿರುವುದಕ್ಕೆ ನಾನು ರಾಜೀನಾಮೆಯಿಂದ ಹಿಂದೆ ಸರಿದಿದ್ದೇನೆ ಎಂದು ಬಸವರಾಜ್ ಹೊರಟ್ಟಿ ಹೇಳಿದರು.

ಈ ಹಿಂದೆ ಇಂತಹ ಘಟನೆ ಆಗಿಲ್ಲ. ಮಾರ್ಚ್ 19, 20, 21ಕ್ಕೆ ಸದನ ಮುಂದುವರೆಸಲಾಗದಂತೆ ಆಯ್ತು. ಬಜೆಟ್ ಮೇಲೆ ಸಿಎಂ ಉತ್ತರ ಕೊಟ್ಟ ನಂತರ ಹನಿಟ್ರ್ಯಾಪ್ ಉತ್ತರ ಕೊಡಿಸುತ್ತೇನೆ ಎಂದು ಹೇಳಿದ್ದೆ. ತಪ್ಪಿಗಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಹ ಹೇಳಿದ್ದರು. ಆದರೂ ಅದೇ ಗದ್ದಲದಲ್ಲಿ ಬಿಲ್ ಕೂಡ ಪಾಸ್ ಆಯ್ತು. ಚರ್ಚೆ ಆಗದೆ ಈ ರೀತಿ ಗದ್ದಲದಲ್ಲಿ ಬಿಲ್ ಪಾಸ್ ಆಗಬಾರದು. ಅದು ಜನರಿಗೆ ಮೋಸ ಮಾಡಿದಂತೆ. ನಾನು ಅಲ್ಲಿ ಇದ್ರು ಕೂಡ ಈ ರೀತಿ ಮಾಡಿದ್ರು . ಹೀಗಾಗಿ ಮನಸ್ಸಿಗೆ ಬೇಜಾರ್ ಆಯ್ತು ಎಂದು ಬೇಸರ ಹೊರಹಾಕಿದರು.
ಹಲವು ನಾಯಕರು ರಾಜೀನಾಮೆ ಕೊಡುವುದರಿಂದ ಎಲ್ಲಾ ಬಗೆ ಹರಿಯುವುದಿಲ್ಲ ಅಂದ್ರು. ಹೀಗಾಗಿ ರಾಜೀನಾಮೆ ನೀಡಬಾರದು ಎಂದು ಈಗಾಗಲೇ ತೀರ್ಮಾನ ಮಾಡಿದ್ದೇನೆ. 27ರ ನಂತರ ಎಲ್ಲಾ 75 ಸದಸ್ಯರಿಗೆ ಪತ್ರ ಕಳುಹಿಸುತ್ತೇನೆ. ಯಾರು ನನ್ನ ಮಾತು ಮೀರಲ್ಲ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಿನ ದಿನಮಾನಗಳಲ್ಲಿ ಒಣ ಪ್ರತಿಷ್ಠೆನೇ ಜಾಸ್ತಿ ಆಗಿದೆ. ಜನರ ಅಭಿವೃದ್ಧಿ ಬಗ್ಗೆ ಯಾವ ಚರ್ಚೆ ಕೂಡ ಆಗಿಲ್ಲ . ಹನಿಟ್ರ್ಯಾಪ್ ಬಗ್ಗೆ ಮುಖ್ಯಮಂತ್ರಿ ಕ್ರಮ ಕೈಗೊಳ್ಳುತ್ತೇವೆ ಅಂದ್ರೆ ಮುಗಿದೋಯ್ತು. ಮುಂದಿನ ಅಧಿವೇಶನಕ್ಕೆ ಸದನ ಉತ್ತಮಗೊಳಿಸುವ ಕೆಲಸ ಮಾಡುತ್ತೇವೆ. ಈ ಘಟನೆ ಆಗಿದ್ದು ಒಳ್ಳೆದಾಯ್ತು, ಸುಧಾರಣೆಗೆ ಒಂದು ದಾರಿ ಆದಂತಾಗಿದೆ. ನಾನು ಸ್ವಲ್ಪ ಭಾವುಕನಾಗೋದು ಸಹಜವಾಗಿ ಕಣ್ಣಲ್ಲಿ ನೀರು ಬರುತ್ತೆ. ವ್ಯವಸ್ಥೆ ಸರಿ ಪಡಿಸಲು ಏನಾದರೂ ಮಾಡಬೇಕು . ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!