ರೈನೋ ರೋಮಾರಿಯೋ ಶೆಫರ್ಡ್ ದಾಳಿಗೆ ಸಿಎಸ್‌ಕೆ ಧೂಳಿಪಟ….

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ,ರೊಮಾರಿಯೊ ಶೆಫರ್ಡ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ. ಈ ಅರ್ಧಶತಕದೊಂದಿಗೆ ಐಪಿಎಲ್ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ (13 ಎಸೆತಗಳು) ಅಗ್ರಸ್ಥಾನದಲ್ಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ 52 ನೇ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೊಮಾರಿಯೊ ಶೆಫರ್ಡ್ 14 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 53 ರನ್ ಬಾರಿಸಿದ್ದರು, ಅದು ಸಹ 378.6 ಸ್ಟ್ರೈಕ್ ರೇಟ್ ನೊಂದಿಗೆ ಎಂಬುದು ವಿಶೇಷ ಹಾಗೂ ಅಚ್ಚರಿ ಮೂಡಿಸುವಂತದ್ದು. ಈ ಸ್ಪೋಟಕ ಅರ್ಧಶತಕದೊಂದಿಗೆ ಆರ್ಸಿಬಿ ಪರ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ದಾಖಲೆ ರೊಮಾರಿಯೊ ಪಾಲಾಯಿತು.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಗೇಲ್ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದರು.ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿಯುವಲ್ಲಿ ವೆಸ್ಟ್ ಇಂಡೀಸ್ ಆಟಗಾರನೇ ಆಗಿರುವ ರೊಮಾರಿಯೊ ಶೆಫರ್ಡ್ ಯಶಸ್ವಿಯಾಗಿದ್ದಾರೆ. ಅದು ಕೂಡ 14 ಎಸೆತಗಳಲ್ಲಿ ಸ್ಪೋಟಕ ಹಾಫ್ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

ಇನ್ನು ರೊಮಾರಿಯೊ ಶೆಫರ್ಡ್ ಬಾರಿಸಿದ ಈ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್ಸಿಬಿ ತಂಡ 2 ರನ್ಗಳ ರೋಚಕ ಜಯ ಸಾಧಿಸಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!