ರೈಲ್ವೆ ಇಲಾಖೆಯ ಪರೀಕ್ಷೆಗೆ ಜನಿವಾರ ನಿರ್ಬಂಧ ವಿವಾದಕ್ಕೆ ಕೊನೆಗೂ ತೆರೆ ಎಳೆದ ಸೋಮಣ್ಣ….

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ದೆಹಲಿಯಿಂದ ಸುದ್ದಿಗೊಷ್ಠಿ ನಡೆಸಿ, ವಿವಾದಕ್ಕೆ ತೆರೆ ಎಳೆದಿದ್ದಾರೆ.ಇತ್ತೀಚಗಷ್ಟೆ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಸರ್ಕಾರದ ವಿರುದ್ಧ ಹಿಂದೂ ಪರ ಸಂಘಟನೆಗಳು ಮತ್ತು ಬ್ರಾಹ್ಮಣ ಮಹಾಸಂಘಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ರೇಲ್ವೆ ಇಲಾಖೆಯ ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ವಿಷಯದ ಬಗ್ಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ ಎಂದಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಏಪ್ರಿಲ್ 28, 29 ಮತ್ತು 30 ರಂದು ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ನಡೆಯುತ್ತದೆ. ಅಭ್ಯರ್ಥಿಗಳು ಜನಿವಾರ, ಮಂಗಳಸೂತ್ರ ತೆಗೆದು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ಬಂದಿವೆ. ಈ ಬಗ್ಗೆ ಸರಿಪಡಿಸುವಂತೆ ಸಂಸದರು, ಶಾಸಕರು ಮನವಿ ಮಾಡಿರುತ್ತಾರೆ. ಬ್ರಾಹ್ಮಣ ಮಹಾಸಭಾ, ವಿವಿಧ ಸಂಘಟನೆಗಳು ಸಹ ನನ್ನ ಗಮನ ಸೆಳೆದಿವೆ ಎಂದು ತಿಳಿಸಿದರು. ಹೀಗಾಗಿ, ಈ ಬಗ್ಗೆ ಅಶ್ವಿನಿ ವೈಷ್ಣವ್, ಅಧಿಕಾರಿಗಳ ಜತೆ ಚರ್ಚಿಸಿ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಂಗಳಸೂತ್ರ ಧರಿಸಿ ಪರೀಕ್ಷೆ ಬರೆಯಲು ಬಂದರೆ ತೊಂದರೆ ನೀಡಬಾರದೆಂದು ಸೂಚನೆ ನೀಡಲಾಗಿದೆ. ಇತರೆ ನಿಯಮ ಪಾಲಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚನೆ ನೀಡಲಾಗಿದೆ. ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯಲು ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!