ವಿಮೆ ಹಣಕ್ಕಾಗಿ ಮಗನೇ ತನ್ನ ತಂದೆಯನ್ನು ಕೊ* ಮಾಡಿ, ಬಳಿಕ ಅಪಘಾತ ಎಂದು ಬಿಂಬಿಸಲು ಯತ್ನ: ಪಿರಿಯಾಪಟ್ಟಣದಲ್ಲಿ ಘಟನೆ.

ಪಿರಿಯಾಪಟ್ಟಣ :- ವಿಮೆ ಹಣದ ಆಸೆಗಾಗಿ ತಂದೆಯನ್ನೇ ಕೊಲೆ ಮಾಡಿದ ಮಗನೊಬ್ಬ ಬಳಿಕ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಕಥೆ ಹೆಣೆಯಲು ಯತ್ನಿಸಿದ ಪ್ರಕರಣ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಹತ್ಯೆ ಮಾಡಿದ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣದ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯ ಪಾಂಡು ಎಂಬಾತನೇ ತನ್ನ ತಂದೆ ಅಣ್ಣಪ್ಪ ಅವರನ್ನು ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಪಿರಿಯಾಪಟ್ಟಣದ ಬೈಲುಕುಪ್ಪೆ ಬಳಿ ಬುಧವಾರ ಈ ಘಟನೆ ನಡೆದಿದೆ.

ಅಣ್ಣಪ್ಪನ ಹೆಸರಲ್ಲಿ ವಿಮೆ ಮಾಡಿಸಿದ ಮಗ ಪಾಂಡು, ಆ ಹಣದ ಆಸೆಗೆ ಕೃತ್ಯ ಎಸಗಿದ್ದಾನೆ. ‘ನಿಮಗೆ ಟಿಬೇಟಿಯನ್ ಮೊದಲನೇ ಕ್ಯಾಂಪಿನಲ್ಲಿ ಕೆಲಸ ಇದೆ, ನೀವು ಹೋಗಿ’ ಎಂದು ತಂದೆಗೆ ಹೇಳಿರುವ ಆರೋಪಿ, ಬಳಿಕ ಹಿಂಬದಿಯಿಂದ ಫಾಲೋ ಮಾಡಿಕೊಂಡು ಬಂದು ತಲೆ ಭಾಗಕ್ಕೆ ದೊಣ್ಣೆಯಿಂದ ಬಲವಾಗಿ ಹೊಡೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ಅಣ್ಣಪ್ಪ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಆರೋಪಿಯು ತಂದೆಯ ಶವವನ್ನು ಬಿ.ಎಂ. ರಸ್ತೆಯ ಮಂಚ ದೇವನಹಳ್ಳಿ ಸಮೀಪ ಬಿಸಾಡಿದ್ದಾನೆ. ಸ್ವಲ್ಪ ಸಮಯದ ನಂತರ ಪೊಲೀಸ್ ಠಾಣೆಗೆ ಬಂದು ತನ್ನ ತಂದೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ ಎಂದು ಕಥೆ ಕಟ್ಟಿ ದೂರು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಂಡು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಬ್ ಇನ್ಸ್ಪೆಕ್ಟರ್ ಅಜಯ್ ಕುಮಾರ್ ಮತ್ತು ತಂಡ ಅನುಮಾನದ ಮೇಲೆ ವಿಚಾರಣೆ ನಡೆಸಿದ್ದಾರೆ. ಆಗ ಆರೋಪಿಯು ತನ್ನ ತಪ್ಪನ್ನು ಒಪ್ಪಿಕೊಂಡಿದ್ಧಾನೆ. ತನ್ನ ತಂದೆ ಹೆಸರಿನಲ್ಲಿ ಇನ್ಶೂರೆನ್ಸ್ ಇದೆ. ಹೀಗಾಗಿ, ಅವರು ಅಪಘಾತದಲ್ಲಿ ಸಾವನ್ನಪ್ಪಿದರೆ ಡಬಲ್ ಹಣ ಸಿಗುವ ಆಸೆಯಲ್ಲಿ ಈ ಕೃತ್ಯ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ಧಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ, ಸಹೋದರ ಮೃತಪಟ್ಟ ಹಿನ್ನೆಲೆಯಲ್ಲಿ ದುಃಖಿತನಾದ ಅಣ್ಣಪ್ಪ ಅವರ ಅಣ್ಣ ಧರ್ಮ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಬೈಲುಕುಪ್ಪೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!