ವೃತ್ತಿಜೀವನಕ್ಕಾಗಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ ಪೃಥ್ವಿ ಶಾ….

ಒಂದು ಸಮಯದಲ್ಲಿ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸೂಚನೆ ನೀಡಿದ್ದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಗೆ, ಪ್ರಸ್ತುತ ರಾಜ್ಯ ತಂಡದಲ್ಲೂ ಸ್ಥಾನವಿಲ್ಲ. ಪೃಥ್ವಿ ಟೀಂ ಇಂಡಿಯಾದಿಂದ ಹೊರಗುಳಿದಿರುವುದಲ್ಲದೆ ಮುಂಬೈ ಕೂಡ ಅವರನ್ನು ರಣಜಿ ಟ್ರೋಫಿಯಿಂದ ಕೈಬಿಟ್ಟಿದೆ. ಇದರ ಜೊತೆಗೆ ಅವರಿಗೆ ಐಪಿಎಲ್‌ನಲ್ಲಿ ಅವಕಾಶವೂ ಸಿಗಲಿಲ್ಲ. ಹೀಗಾಗಿ ತಮ್ಮ ವೃತ್ತಿ ಜೀವನದ ಉಳಿವಿಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಪೃಥ್ವಿ, ಮುಂಬೈ ಕ್ರಿಕೆಟ್ ತಂಡವನ್ನು ತೊರೆದು ಬೇರೆಡೆಗೆ ಹೋಗಲಿದ್ದಾರೆ ಎಂಬ ವರದಿಗಳಿವೆ.

ಪೃಥ್ವಿ ಶಾ ಬರೆದ ಪತ್ರ ಹೀಗಿದೆ….

ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ ಮೂಲಗಳ ಪ್ರಕಾರ, ಪೃಥ್ವಿ ಶಾ ಅವರು ಎಂಸಿಎಗೆ ಇಮೇಲ್ ಮಾಡಿದ್ದಾರೆ. ಅದರಲ್ಲಿ ಅವರು, ‘ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ ಅಚಲ ಬೆಂಬಲ ಮತ್ತು ತಂಡಕ್ಕಾಗಿ ಆಡಲು ಅವಕಾಶ ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಎಂಸಿಎಯ ಭಾಗವಾಗಿರುವುದು ನಿಜಕ್ಕೂ ಗೌರವದ ಸಂಗತಿ. ನನ್ನ ವೃತ್ತಿಜೀವನದ ಈ ಹಂತದಲ್ಲಿ, ನನಗೆ ಬೇರೆ ರಾಜ್ಯ ಸಂಘದಿಂದ ವೃತ್ತಿಪರ ಕ್ರಿಕೆಟ್ ಆಡುವ ಅವಕಾಶ ಸಿಗುತ್ತಿದೆ, ಇದು ಕ್ರಿಕೆಟಿಗನಾಗಿ ನನ್ನ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಮತ್ತಷ್ಟು ಕೊಡುಗೆ ನೀಡುತ್ತದೆ ಎಂದು ನನಗೆ ಖಚಿತವಾಗಿದೆ. ಭವಿಷ್ಯದಲ್ಲಿ ನಾನು ಆ ತಂಡಕ್ಕಾಗಿ ಆಡಲು ಸಾಧ್ಯವಾಗುವಂತೆ ನನಗೆ NOC ನೀಡುವಂತೆ ನಾನು ವಿನಮ್ರವಾಗಿ ವಿನಂತಿಸುತ್ತೇನೆ’ ಎಂದು ಬರೆದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!