ಶತಕದ ಬಳಿಕ ಲೀಡ್ಸ್‌ನಲ್ಲಿ ಮತ್ತೊಂದು ದಾಖಲೆ ಬರೆದ ಸ್ಪೈಡರ್ ಮ್ಯಾನ್ ರಿಷಭ್ ಪಂತ್….

ಲೀಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ತಮ್ಮ 44ನೇ ಟೆಸ್ಟ್ ಪಂದ್ಯದಲ್ಲಿ 150 ಕ್ಯಾಚ್‌ಗಳನ್ನು ಪೂರ್ತಿಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧೋನಿ ಮತ್ತು ಕಿರ್ಮಾನಿ ನಂತರದ ಸ್ಥಾನದಲ್ಲಿರುವ ಪಂತ್, ಕೇವಲ 44 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ವಿಕೆಟ್‌ಕೀಪರ್ ಆಗಿದ್ದಾರೆ. ಅವರ ಬ್ಯಾಟಿಂಗ್‌ ಕೂಡ ಅದ್ಭುತವಾಗಿದ್ದು, 3000ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ್ದಾರೆ. ಲೀಡ್ಸ್ ಟೆಸ್ಟ್ ಪಂದ್ಯದ ಮೂರನೇ ದಿನದಂದು ಇಂಗ್ಲೆಂಡ್‌ನ ಶತಕವೀರ ಓಲಿ ಪೋಪ್ ಕ್ಯಾಚ್ ಹಿಡಿಯುವ ಮೂಲಕ ಭಾರತೀಯ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಹೊಸ ದಾಖಲೆ ಬರೆದಿದ್ದಾರೆ. ತಮ್ಮ 44 ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿರುವ ಪಂತ್, ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಅವರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಇದಲ್ಲದೆ, ಅವರು 15 ಸ್ಟಂಪಿಂಗ್‌ಗಳನ್ನು ಸಹ ಮಾಡಿದ್ದಾರೆ.

ಇನ್ನು ಬ್ಯಾಟಿಂಗ್‌ ವಿಚಾರದಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಇದುವರೆಗೆ ಆಡಿರುವ 44 ಟೆಸ್ಟ್ ಪಂದ್ಯಗಳ 76 ಇನ್ನಿಂಗ್ಸ್‌ಗಳಲ್ಲಿ ಸುಮಾರು 44 ಸರಾಸರಿಯಲ್ಲಿ 3000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ 7 ಶತಕಗಳು ಮತ್ತು 15 ಅರ್ಧಶತಕಗಳು ಸೇರಿವೆ. ಅಲ್ಲದೆ ಪಂತ್ ಶತಕಗಳ ವಿಷಯದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ. ಭಾರತ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ 90 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 256 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಧೋನಿ 144 ಇನ್ನಿಂಗ್ಸ್‌ಗಳಲ್ಲಿ 38.09 ಸರಾಸರಿಯಲ್ಲಿ 4876 ರನ್ ಗಳಿಸಿದ್ದು, ಇದರಲ್ಲಿ 6 ಶತಕಗಳು ಮತ್ತು 33 ಅರ್ಧಶತಕಗಳು ಸೇರಿವೆ.ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸೈಯದ್ ಕಿರ್ಮಾನಿ 88 ಟೆಸ್ಟ್ ಪಂದ್ಯಗಳಲ್ಲಿ 160 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಕಿರ್ಮಾನಿ ಟೆಸ್ಟ್ ಪಂದ್ಯಗಳಲ್ಲಿ 2759 ರನ್ ಗಳಿಸಿದ್ದು, ಇದರಲ್ಲಿ ಎರಡು ಶತಕಗಳು ಸೇರಿವೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!