ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯ 4ನೇ ದಿನವಾದ ಭಾನುವಾರ ಪಂಕ್ತಿಸೇವೆ ನಿರ್ವಿಘ್ನದಿಂದ ನಡೆಯಿತು. ದೇಗುಲ ಆವರಣ ಬಿಟ್ಟು ಖಾಸಗಿ ಜಮೀನುಗಳಲ್ಲಿ ಬಿಡಾರ ಹೂಡಿದ್ದ ಭಕ್ತರು, ಮಾಂಸದ ಅಡುಗೆ ಮಾಡಿ ಪಂಕ್ತಿಸೇವೆ ನಡೆಸಿದರು.
ಚಿಕ್ಕಲ್ಲೂರು ಕ್ಷೇತ್ರದಲ್ಲಿ 5 ಹಗಲು, 5 ರಾತ್ರಿ ಜಾತ್ರೆ ನಡೆಯಲಿದ್ದು, 4ನೇ ದಿನದಂದು ಪಂಕ್ತಿಸೇವೆ ನಡೆಸಲಾಗುತ್ತದೆ. ಅದರಂತೆ, ಲಕ್ಷಾಂತರ ಮಂದಿ ಭಕ್ತರು ದೇವರಿಗೆ ಅನ್ನ, ಮುದ್ದೆ, ಮಾಂಸದ ಭಕ್ಷ್ಯಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಿ ಸಹಪಂಕ್ತಿ ಭೋಜನ ಸವಿದಿದ್ದಾರೆ. ಐತಿಹಾಸಿಕ, ಭಕ್ತಿ ಪರಾಕಾಷ್ಠೆಯ ಜಾತ್ರೆ ಎಂದೇ ಜನಜನಿತವಾಗಿರುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಸಾವಿರಾರು ಮಂದಿ ಭಕ್ತರು ಪಂಕ್ತಿಸೇವೆ ಸಲ್ಲಿಸಿ ತಮ್ಮ ನಂಬಿಕೆ, ಭಕ್ತಿ ಅಚಲ ಎಂದು ಸಾರಿದರು.

ಮಾಂಸದ ಭಕ್ಷ್ಯ ತಯಾರಿಸಿ ದೇವರಿಗೆ ಎಡೆ ಇಟ್ಟು ಬಳಿಕ ಸಹಪಂಕ್ತಿ ಭೋಜನ ಮಾಡುವ ಆಚರಣೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿತ್ತು. ಜಿಲ್ಲಾಡಳಿತ ಪ್ರಾಣಿ ಬಲಿ ನಿಷೇಧಿಸಿ ಹದ್ದಿನ ಕಣ್ಣಿಟ್ಟಿತ್ತು. ಆಚರಣೆಯನ್ನು ಬಿಡಲೊಪ್ಪದ ಜನರು ದೇವಾಲಯ ಆವರಣದಿಂದ ದೂರದ ಪ್ರದೇಶದಲ್ಲಿ ಮಾಂಸದ ಅಡುಗೆ ತಯಾರಿಸಿ ಶ್ರದ್ಧೆ-ಭಕ್ತಿಯಿಂದ ಎಡೆ ಅರ್ಪಿಸಿದ್ದಾರೆ. ಜಿಲ್ಲೆ ಹೊರ ಜಿಲ್ಲೆಗಳಿಂದ ಬಂದ ಸಾವಿರಾರು ಭಕ್ತರು ಮಾಂಸದೂಟ ತಯಾರಿಸಿ ನೀಲಗಾರರ ಸಂಪ್ರದಾಯಕ್ಕೆ ಅನುಗುಣವಾಗಿ ಎಡೆ ಅರ್ಪಿಸಿ ರಾಚಪ್ಪಾಜಿ, ಸಿದ್ದಾಪ್ಪಾಜಿ ದೇವರಿಗೆ ಮದ್ಯ- ಮಾಂಸ ಅರ್ಪಿಸಿ ಭಕ್ತಿ ಮೆರೆದರು.
ಜಾತ್ರೆಯಲ್ಲಿ ಮಹಿಳಾ ಶಕ್ತಿ ಪ್ರದರ್ಶನ: ಮಹಿಳೆಯರಿಗೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣ ಹಿನ್ನೆಲೆ ಜಾತ್ರೆಗೆ ಮಹಿಳಾ ಸಾಗರವೇ ಹರಿದುಬಂದಿತ್ತು. ಬಸ್ ಗಳಿಗೆ ಹತ್ತಲು ಮಹಿಳೆಯರು ನಾ ಮುಂದೆ- ತಾ ಮುಂದೆ ಎಂದು ಕಿಟಕಿ, ಚಾಲಕರ ಡೋರ್ ಗಳಲ್ಲಿ ಹತ್ತಿದರು. ಕಿಟಕಿಗಳಿಗೆ ಮಕ್ಕಳನ್ನು ತೂರಿಸಿ ಆಸನ ಹಿಡಿಯುವ ಸಾಹಸ ಮಾಡಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!