ಸಚಿವ ಪ್ರಿಯಾಂಕ್ ಖರ್ಗೆರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ : ಗೃಹ ಸಚಿವ ಪರಮೇಶ್ವರ.

ಬೆಂಗಳೂರು,:- ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ. ಡೆತ್ನೋಟ್ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು.

ತನಿಖೆಯ ವರದಿ ಬಂದ ನಂತರ ಏನು ಎಂಬುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಮರ್ಥವಾಗಿದೆ. ಅನೇಕ ಪ್ರಕರಣಗಳಲ್ಲಿ ಸಿಐಡಿ ತನಿಖೆಯ ವರದಿ ಬಂದಿದೆಯಲ್ಲವೇ? ಬಿಜೆಪಿಯವರು ಹೇಳಿದ್ದೆಲ್ಲ ಕೇಳುವುದಿಲ್ಲ. ಸಕರಾತ್ಮಕವಾಗಿ ಸಲಹೆ, ಸೂಚನೆ ನೀಡಿದರೆ ಕೇಳುತ್ತೇವೆ. ಅನವಶ್ಯಕವಾಗಿ ಎಲ್ಲದರಲ್ಲು ರಾಜಕೀಯ ಮಾಡಲು ಹೋದರೆ ಕೇಳುವುದಿಲ್ಲ ಎಂದರು.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಲ್ಲವೇ. ಈ ನಿಟ್ಟಿನಲ್ಲಿ ಸಿಐಡಿ ಅವರು ತಮ್ಮ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಹೊಸ ವರ್ಷದ ಸಂತೋಷವನ್ನು ಹಂಚಿಕೊಳ್ಳಬೇಕು. ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆಯಾಗದಂತೆ ಹೊಸ ವರ್ಷ ಆಚರಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!