ಸತತವಾಗಿ 27 ಪ್ರಕರಣಗಳನ್ನು ಗೆದ್ದು ಅಚ್ಚರಿ ಮೂಡಿಸಿದ ನಕಲಿ ವಕೀಲ….

ಹೌದು ವೀಕ್ಷಕರೇ ಈ ವಿಷಯಕ್ಕೆ ಸಂಬಂಧಿಸಿದಂತಹ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ….ಈಗಿನ ಕಾಲದಲ್ಲಿ ಕೆಲವರು ತಮ್ಮ ಬುದ್ಧಿವಂತಿಕೆಯಿಂದಲೇ ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಅದರಲ್ಲಿ ಯಾವುದೇ ವೈದ್ಯಕೀಯ ಪದವಿ ಪಡೆದುಕೊಳ್ಳದೇ ಕ್ಲಿನಿಕ್ ಓಪನ್ ಮಾಡಿ ಜನಸಾಮಾನ್ಯರನ್ನು ಯಾಮಾರಿಸಿ ಹಣ ಮಾಡುವವರನ್ನು ನೋಡಿರಬಹುದು. ಆದ್ರೆ ಇಲ್ಲೊಬ್ಬ ವ್ಯಕ್ತಿ ನಕಲಿ ವಕೀಲನಾಗಿದ್ದು ಬರೋಬ್ಬರಿ 27 ಪ್ರಕರಣಗಳನ್ನು ಗೆದ್ದಿದ್ದು, ಇದನ್ನು ಕೇಳಿದ ನಿಮಗೆ ಅಚ್ಚರಿ ಎನಿಸಬಹುದು, ಕಾಲ ತುಂಬಾನೇ ಕೆಟ್ಟು ಹೋಗಿದೆ. ಯಾವುದು ನಕಲಿ ಯಾವುದು ಅಸಲಿ ಎಂದು ಗುರುತಿಸುವುದೇ ಕಷ್ಟವಾಗಿದೆ.ನ್ಯಾಯಾಂಗ ವ್ಯವಸ್ಥೆಯಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದೆ. ಕಾನೂನು ವ್ಯವಸ್ಥೆ ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ನಕಲಿ ವಕೀಲ ಎಂದು ಯಾಮಾರಿಸಿದ್ದು ಮಾತ್ರವಲ್ಲ ಈತನು ತನ್ನ ಬುದ್ಧಿವಂತಿಕೆಯಿಂದ ಎಲ್ಲಾ ಕೇಸ್ ಗಳನ್ನು ಗೆದಿದ್ದಾನೆ. ಈತನ ಹೆಸರು ಬ್ರಿಯನ್ ಮೆಂಡ ಆಗಿದ್ದು, ಈ ಘಟನೆಯೂ ಕೀನ್ಯಾದಲ್ಲಿ ನಡೆದಿದೆ.

ಈಗಿನ ಕಾಲದಲ್ಲಿ ವಕೀಲ ವೃತ್ತಿ ಸೇರಲು ಬೇಕಾದ ಪದವಿ ಪಡೆದುಕೊಂಡಿದ್ದರೂ ಕೇಸ್ ಗಳನ್ನು ಗೆಲ್ಲಲು ಅಷ್ಟೇ ಬುದ್ಧಿವಂತಿಕೆ ಬೇಕಾಗುತ್ತದೆ. ಇಂತಹ ಕಾಲಘಟ್ಟದಲ್ಲಿ ಬ್ರಿಯನ್ ಮೆಂಡ ಹೆಸರಿನ ನಕಲಿ ವಕೀಲನೊಬ್ಬನು ಒಂದಲ್ಲ, ಎರಡಲ್ಲ ಬರೋಬ್ಬರಿ 27 ಪ್ರಕರಣಗಳನ್ನು ಗೆದ್ದು, ವಕೀಲ ವೃತ್ತಿಯಲ್ಲಿರುವವರಿಗೂ ಅಚ್ಚರಿ ಮೂಡುವಂತೆ ಮಾಡಿದ್ದಾನೆ.ಹೌದು ಕೀನ್ಯಾದ ಈ ವ್ಯಕ್ತಿಯೂ ನಿಜವಾದ ವಕೀಲನಲ್ಲ, ಜನಸಾಮಾನ್ಯರಿಗಾಗಿ ಸರಿಸುಮಾರು 26 ಪ್ರಕರಣಗಳನ್ನು ಗೆದ್ದುಕೊಂಡಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಈತನು ತನ್ನ ಬುದ್ಧಿವಂತಿಕೆಯನ್ನು ಬಳಸಿಕೊಂಡು ತನ್ನ ಮೇಲೆ ಹಾಕಲಾದ ಕೇಸ್ ವಿರುದ್ಧ ವಾದಿಸುವಲ್ಲಿ ಯಶಸ್ವಿಯಾಗಿದ್ದಾನೆ.

ಹೌದು ಈ ನಕಲಿ ವಕೀಲನು 27 ನೇ ಪ್ರಕರಣವನ್ನು ವಾದಿಸಿ ಗೆದಿದ್ದು ವಕೀಲ ವೃತ್ತಿಯಲ್ಲಿರುವವವರೂ ಬಾಯಿಯ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿದ್ದಾನೆ. ಯಾವುದೇ ಕಾನೂನು ಪದವಿ ಪಡೆಯದಿದ್ದರೂ ಕೂಡ ತನ್ನ ಚಾಣಚಕ್ಯತೆ ಹಾಗೂ ಬುದ್ಧಿವಂತಿಕೆಯಿಂದ ಒಟ್ಟಾರೆ 27 ಪ್ರಕರಣಗಳನ್ನು ವಾದಿಸಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾನೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು