ಸಿಸಿಎಲ್ ಫೈನಲ್ ನಲ್ಲಿ ರೋಚಕತೆಯ ತಿರುವು….

ಪಂಜಾಬ್ ದಿ ಶೇರ್ ತಂಡವು ಭಾನುವಾರ ನಡೆದ ಸಿಸಿಎಲ್ 2024ರ ಫೈನಲ್ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಚೆನ್ನೈ ತಂಡ ರನ್ನರ್ ಅಪ್ ಆಯಿತು. ಕರ್ನಾಟಕ ಬುಲ್ಡೋಜರ್ ತಂಡ ಸೆಮಿಫೈನಲ್ನಲ್ಲಿ ಸೋತಿತು. ಈ ಟೂರ್ನಮೆಂಟ್ನಲ್ಲಿ ಕರ್ನಾಟಕದ ಡಾರ್ಲಿಂಗ್ ಕೃಷ್ಣ ಅವರು ಅತ್ಯುತ್ತಮ ಬ್ಯಾಟರ್ ಪ್ರಶಸ್ತಿಯನ್ನು ಪಡೆದರು.
ಕಳೆದ ಕೆಲ ವಾರಗಳಿಂದ ಹಲವು ಹಂತಗಳಲ್ಲಿ ಸಾಗುತ್ತಿದ್ದ ಸಿಸಿಎಲ್ನ ಫಿನಾಲೆ ಭಾನುವಾರ (ಮಾರ್ಚ್ 3) ನಡೆದಿದೆ. ಈ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಪಂಜಾಬ್ ದೆ ಶೇರ್ ಮುಖಾಮುಖಿ ಆದವು. ಈ ವೇಳೆ ಚೆನ್ನೈ ತಂಡ ಸೋತಿದ್ದು, ಪಂಜಾಬ್ ತಂಡ ಗೆಲುವಿನ ನಗೆ ಬೀರಿದೆ. ಈ ಮೂಲಕ ಮೊದಲ ಬಾರಿಗೆ ಕಪ್ಗೆ ಮುತ್ತಿಟ್ಟಿದೆ. ಕರ್ನಾಟಕ ಬುಲ್ಡೋಜರ್ ತಂಡ ಸೆಮಿ ಫೈನಲ್ ಹಂತದಲ್ಲೇ ಸೋಲನ್ನು ಕಂಡಿತ್ತು.

ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಮಾಡಿದ ಚೆನ್ನೈ 89 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತು. ನಂತರ ಬ್ಯಾಟ್ ಮಾಡಿದ ಪಂಜಾಬ್ 1 ವಿಕೆಟ್ ಕಳೆದುಕೊಂಡು 103 ರನ್ ಕಲೆ ಹಾಕಿತು. ಈ ಮೂಲಕ ಪಂಜಾಬ್ 14 ರನ್ಗಳ ಮುನ್ನಡೆ ಸಾಧಿಸಿತು. ನಂತರ ಬ್ಯಾಟ್ ಬೀಸಿದ ಚೆನ್ನೈ 85 ರನ್ ಗಳಿಸಲಷ್ಟೇ ಶಕ್ಯವಾಯಿತು.ಪಂಜಾಬ್ ತಂಡ 14 ರನ್ಗಳ ಮುನ್ನಡೆ ಸಾಧಿಸಿದ್ದರಿಂದ 72 ರನ್ಗಳನ್ನು ಬಾರಿಸಿದರೆ ಪಂಜಾಬ್ಗೆ ಗೆಲುವು ಸಿಗುತ್ತಿತ್ತು. ಇದನ್ನು ಕೇವಲ 8 ಓವರ್ಗಳಲ್ಲಿ ಚಚ್ಚಿ ಪಂಜಾಬ್ ಗೆಲುವಿನ ನಗೆ ಬೀರಿತು. ಈ ಮೂಲಕ 8 ವಿಕೆಟ್ಗಳ ಗೆಲುವು ಕಂಡಿತು. ಮೊದಲ ಬಾರಿಗೆ ಕಪ್ ಗೆದ್ದ ಖುಷಿಯನ್ನು ಪಂಜಾಬ್ ತಂಡ ಆಚರಿಸಿಕೊಂಡಿತು. ಚೆನ್ನೈ ರನ್ನರ್ ಅಪ್ ಸ್ಥಾನಕ್ಕೆ ಖುಷಿಪಟ್ಟುಕೊಂಡಿತು.
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್ನಲ್ಲಿ ಕರ್ನಾಟಕ ಪರ ಅದ್ಭುತ ಪ್ರದರ್ಶನ ನೀಡಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!