ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಡಾ.ಕೆ.ಬಿ. ಗಣಪತಿ ನಿಧನ

ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಡಾ.ಕೆ.ಬಿ. ಗಣಪತಿ ನಿಧನ

ಮೈಸೂರು: ಸ್ಟಾರ್ ಆಫ್ ಮೈಸೂರು’ ಮತ್ತು ‘ಮೈಸೂರು ಮಿತ್ರ’ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಗಣಪತಿ (85) ಇಂದು ಬೆಳಗ್ಗೆ ನಗರದಲ್ಲಿ ನಿಧನರಾದರು. ಅವರು ತಮ್ಮ ಪತ್ನಿ ರಾಲಿ ಗಣಪತಿ, ಪುತ್ರರಾದ ವಿಕ್ರಮ್ ಮುತ್ತಣ್ಣ ಮತ್ತು ಮಿಕ್ಕಿ ಬೋಪಣ್ಣ, ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧುಗಳು, ಸ್ನೇಹಿತರು, ಹಿತೈಷಿಗಳು, ಗೌರವಾನ್ವಿತ ಓದುಗರು, ಜಾಹೀರಾತುದಾರರು ಮತ್ತು ಪೋಷಕರನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಗೆ ಅವರ ನಿವಾಸಕ್ಕೆ ತರಲಾಗುವುದು.

ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. ಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀವಾಗಿದ್ದವರು.
ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ
ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ವಿಳಾಸ: ‘ಫೋರ್ತ್ ಎಸ್ಟೇಟ್’ #375, 8ನೇ ಮುಖ್ಯ, 9ನೇ ಅಡ್ಡ ಲಲಿತಾದ್ರಿ ರಸ್ತೆ, ಕೆ.ಸಿ. ಲೇಔಟ್, ಮೈಸೂರು – 5700 11]. ಇಂದು (ಜುಲೈ 13) ಸಂಜೆ 4 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬವನ್ನು ಮೊ.: 98805-31002 ಅಥವಾ 99005-01179 ನಲ್ಲಿ ಸಂಪರ್ಕಿಸಬಹುದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!