ಹಣ್ಣುಗಳ ರಾಣಿ ಎಂದೇ ಕರೆಸಿಕೊಳ್ಳುವ ಈ ಹಣ್ಣಿನ ಹೆಸರು ಗೊತ್ತಾ?..

ಹಣ್ಣುಗಳು ಎಂದೊಡನೆ ಎಂತವರಿಗಾದರೂ ತಿನ್ನಬೇಕೆಂಬ ಆಸೆ ಆಗುತ್ತದೆ. ನಮಗೆ ಗೊತ್ತೇ ಇರದ ಅದೆಷ್ಟೋ ವಿಶಿಷ್ಟ ಜಾತಿಯ ಹಣ್ಣುಗಳು ಈ ಸೃಷ್ಟಿಯಲ್ಲಿವೆ.ಸಾಮಾನ್ಯವಾಗಿ ಹಣ್ಣುಗಳ ರಾಜ ಎಂದ ಕೇಳಿದ ಕೂಡಲೇ ನೆನಪಿಗೆ ಬರುವುದೇ ಈ ಮಾವಿನಹಣ್ಣು. ಹಾಗಾದ್ರೆ ಹಣ್ಣುಗಳ ರಾಣಿ ಎಂದು ಯಾವ ಹಣ್ಣನ್ನು ಕರೆಯುತ್ತಾರೆ ಎಂದು ನಿಮಗೆ ತಿಳಿದಿದೆಯೇ. ಹಣ್ಣುಗಳ ರಾಣಿ ಕೂಡ ಇದೆಯೇ ಎಂದು ನಿಮಗೆ ಅಚ್ಚರಿಯಾಗಬಹುದು. ಹೌದು, ಈ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಕ್ವೀನ್ ಆಫ್ ಫ್ರೂಟ್ಸ್ ಎನ್ನುವ ಖ್ಯಾತಿಗೆ ಪಾತ್ರರಾಗಿರುವ ಈ ಹಣ್ಣಿನ ಕುರಿತಾದ ಕೆಲವು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಣ್ಣುಗಳ ರಾಣಿ ಎಂದೇ ಖ್ಯಾತಿ ಪಡೆದಿರುವ ಹಣ್ಣು ಮ್ಯಾಂಗೋಸ್ಟೀನ್. ಇದೊಂದು ಉಷ್ಣವಲಯದಲ್ಲಿ ಬೆಳೆಯಲಾಗುವ ಹಣ್ಣಾಗಿದ್ದು, ಇಲ್ಲಿಯವರೆಗೆ ಈ ಹಣ್ಣಿನ ಹೆಸರನ್ನು ಕೇಳಿರಲೇ ಇಲ್ಲವಲ್ಲ ಎಂದು ನಿಮಗೆ ಅನಿಸಬಹುದು. ಆದರೆ ಇದೇ ಹಣ್ಣುಗಳ ರಾಣಿ.

ಇನ್ನು ಈ ಹಣ್ಣು ಯಾವ ರೀತಿ ಇರುತ್ತದೆ ಎಂಬುದನ್ನು ನೋಡುವುದಾದರೆ, ಈ ಮ್ಯಾಂಗೋಸ್ಟೀನ್ ಹಣ್ಣು ನೋಡುವುದಕ್ಕೆ ಗಾಢ ನೇರಳೆ ಬಣ್ಣದಲ್ಲಿದ್ದು, ಒಳಗೆ ಬಿಳಿ ಬಣ್ಣದ ತಿರುಳನ್ನು ಹೊಂದಿದ್ದು, ನೋಡುವುದಕ್ಕೆ ಮಾತ್ರವಲ್ಲ ರುಚಿ ಕೂಡ ಅಷ್ಟೇ ಅದ್ಭುತ. ಈ ಹಣ್ಣಿನ ಸೇವನೆಯಿಂದ ಆರೋಗ್ಯ ಲಾಭಗಳು ಸಾಕಷ್ಟು ಇವೆ.ಥೈಲ್ಯಾಂಡ್, ಮಲೇಷಿಯಾ, ಇಂಡೋನೇಷ್ಯಾ ಹಾಗೂ ಫಿಲಿಪೈನ್ಸ್ ನಲ್ಲಿ ಹೇರಳವಾಗಿ ಬೆಳೆಯಲಾಗುವ ಈ ಹಣ್ಣು ಋತುಮಾನದ ಹಣ್ಣಾಗಿದೆ. ಕೇರಳ, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಈ ಹಣ್ಣು ಕಾಣಸಿಗುತ್ತದೆ.

ಭಾರತದಲ್ಲಿ ಈ ಹಣ್ಣು ಮೇ ಆಗಸ್ಟ್ ತಿಂಗಳಿನಲ್ಲಿ ಹೇರಳವಾಗಿ ಕಾಣಸಿಗುತ್ತದೆ. ಇದು ರುಚಿಯಲ್ಲಿ ಮಾವಿನ ಹಣ್ಣಿನಂತೆ ಇದ್ದು, ಹೀಗಾಗಿ ಇದಕ್ಕೆ ಮ್ಯಾಂಗೋಸ್ಟೀನ್ ಎಂಬ ಹೆಸರು ಬಂದಿತಂತೆ. ಅಷ್ಟೇ ಅಲ್ಲದೇ, 1930ರ ದಶಕದಲ್ಲಿ ಅಮೆರಿಕಾದ ಸಸ್ಯಶಾಸ್ತ್ರಜ್ಞ ಡೇವಿಡ್ ಫೇರ್ಚೈಲ್ಡ್ ಮ್ಯಾಂಗೋಸ್ಟೀನ್ಗೆ “ಹಣ್ಣುಗಳ ರಾಣಿ” ಎಂದು ಕರೆದಿದ್ದು, ಅಂದಿನಿಂದ ರಸಭರಿತವಾದ ಈ ಹಣ್ಣು ಈ ಹೆಸರಿನಿಂದಲೇ ಜನಪ್ರಿಯವಾಯಿತು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು