ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ

ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ

ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳುಬೆಳಿಗ್ಗೆ 5:00 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ. ಈ ವಿಶೇಷ ವ್ಯವಸ್ಥೆ ಕೇವಲ ಸೋಮವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮರುದಿನ ಮಂಗಳವಾರ (ಆ.19) ದಿಂದ ಹಳದಿ ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 6:30 ರಿಂದ ಪ್ರಾರಂಭವಾಗಲಿವೆ.
ಹಿಸುತ್ತವೆ.

ಹಳದಿ ಮಾರ್ಗ ಎಲ್ಲಿಂದ ಎಲ್ಲಿಯವರೆಗೆ ಸಂಚಾರ
ಆರ್​ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಸಂಪರ್ಕ ಕಲಿಸಲಾಗಿದ್ದು, ಒಟ್ಟು 19.15 ಕಿಲೋ ಮೀಟರ್ ಉದ್ದದ ಮಾರ್ಗವಾಗಿದೆ. ಬೆಂಗಳೂರಿನ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿಯಿಂದ ಬೆಂಗಳೂರಿನ ಕೇಂದ್ರ ಭಾಗದ ನಡುವೆ ಸಂಪರ್ಕ ಕೊಂಡಿಯಾಗಿದೆ.

ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ. ಹಳದಿ ಮಾರ್ಗದ ರೈಲು 3 ಮೆಟ್ರೋ ಲೈನ್‌ಗೆ ಕೂಡುತ್ತದೆ. ಹಳದಿ ಮಾರ್ಗವು ಹಸಿರು ಮಾರ್ಗ, ಗುಲಾಬಿ, ನೀಲಿ ಮಾರ್ಗಕ್ಕೆಕ್ಕೆ ಕೂಡುತ್ತದೆ. ಜಯದೇವ ಆಸ್ಪತ್ರೆ ನಿಲ್ದಾಣವು ಅತಿ ಎತ್ತರ ಹಾಗೂ ದೊಡ್ಡ ಮೆಟ್ರೋ ನಿಲ್ದಾಣ ಎಂಬ ಖ್ಯಾತಿ ಪಡೆದಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗದ ವಿಶೇಷತೆಗಳೇನು? ಇಲ್ಲಿದೆ ವಿವರ, ಫೋಟೋಸ್​ ನೋಡಿ

ನಮ್ಮ ಮೆಟ್ರೋ ಹಳದಿ ಮಾರ್ಗದ ನಿಲ್ದಾಣಗಳು: ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರ್ ರಸ್ತೆ, ಇನ್ಫೋಸಿಸ್‌ ಫೌಂಡೇಶನ್ ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಬೆರತೇನ ಅಗ್ರಹಾರ, ಹೊಸ ರೋಡ್, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿ ಗುಡ್ಡ ದೇವಸ್ಥಾನ, ಆರ್‌.ವಿ (ರಾಷ್ಟ್ರೀಯ ವಿದ್ಯಾಲಯ) ರಸ್ತೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!