ಹಾಡುಹಗಲೇ ವೃದ್ದ ದಂಪತಿ ಭೀಕರ ಕೊ*, ಹುಣಸೂರು ತೋಟದ ಮನೆಯಲ್ಲಿ ಘಟನೆ.

ಹುಣಸೂರು :- ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ ಶಾಂತಮ್ಮ (52)ಮೃತಪಟ್ಟವರು.
ಇವರಿಗೆ ಗ್ರಾಮ‌ ಪಂಚಾಯ್ತಿ ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಓರ್ವ ಮಗಳಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಇಂದು ಸಂಜೆ ಶುಂಠಿ ತುಂಬಿಕೊಳ್ಳಲು ಕುಕ್ಕೆ ತರಲು ಕಾರ್ಮಿಕ ಗಣೇಶ್ ತೋಟದ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.ರಕ್ತದ ಮಡುವಿನಲ್ಲಿ ಮೃತದೇಹಗಳನ್ನ ಕಂಡ ಗಣೇಶ್ ಕೂಡಲೇ ಪುತ್ರ ದೇವರಾಜ್ ಗೆ ತಿಳಿಸಿದ್ದಾರೆ.

ದೇವರಾಜ್ಮ ನೆಗೆ ಬಂದ ವೇಳೆಗೆ ಇಬ್ಬರೂ ಸಾವನ್ನಪ್ಪಿದ್ದರೆಂದು ಹೇಳಲಾಗಿದೆ. ಕೂಡಲೇ ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ,ಎಸ್ಪಿ ವಿಷ್ಣುವರ್ಧನ್ ,ಡಿವೈಎಸ್ಪಿ ಗೋಪಾಲಕೃಷ್ಣ,ಸಬ್ ಇನ್ಸ್ಪೆಕ್ಟರ್ ಲೋಲಾಕ್ಷಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೈಸೂರಿನಿಂದ ಶ್ವಾನದಳ. ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ…

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!