ಹಾಸನದಲ್ಲಿ 2 ವರ್ಷದಲ್ಲಿ 507 ಜನರು ಹೃದಯಾಘಾತಕ್ಕೆ ಬಲಿ:ಡಿಹೆಚ್​ಓ ಸ್ಪೋಟಕ ಹೇಳಿಕೆ ….

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಎರಡು ವರ್ಷಗಳಲ್ಲಿ ಬರೋಬ್ಬರಿ 507 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 20 ರಿಂದ 30 ವಯಸ್ಸಿನ 14 ಜನರು, 30 ರಿಂದ 40 ವಯಸ್ಸಿನ 40 ಜನ ಹಾಗೂ 40 ವರ್ಷ ಮೇಲ್ಪಟ್ಟ 136 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದುಶ್ಚಟ, ಅಸಮತೊಲನದ ಅಹಾರ ಸೇವನೆ ಹಾಗೂ ಜೀವನ ಶೈಲಿಯಿಂದಲೇ ಹೃದಯಘಾತ ಸಂಭವಿಸುತ್ತಿವೆ ಎಂದು ಹಾಸನ ಡಿಹೆಚ್​ ಓ ಕಾರಣ ತಿಳಿಸಿದ್ದಾರೆ.

ಇನ್ನು ಈ ಸರಣಿ ಹೃದಯಾಘಾತ ಪ್ರಕರಣಗಳ ಬಗ್ಗೆ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಅನಿಲ್ ಪ್ರತಿಕ್ರಿಯಿಸಿದ್ದು, ಯುವ ಜನರಲ್ಲಿ ಹೆಚ್ಚುತ್ತಿರುವ ದುಶ್ಚಟ, ಅಸಮತೊಲನದ ಅಹಾರ ಸೇವನೆ, ಜೀವನ ಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಹೃದಯಾಘಾತ ತಡೆಗೆ ಸಂಸದರ ನೇತೃತ್ವದಲ್ಲಿ ಎಲ್ಲಾ ಅರೋಗ್ಯ ಅದಿಕಾರಿಗಳ ಸಭೆ ನಡೆಸಲಾಗಿದ್ದು, ಹೃದಯಾಘಾತ ತಡೆಗೆ ಅರೋಗ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಮಾಡಲು ಸಿದ್ದತೆ ನಡೆಸಲಾಗಿದೆ. ಅರೋಗ್ಯ ಕಾರ್ಯಕರ್ತೆ ಯರು ಮೂಲಕ ಪ್ರಾಥಮಿಕ ಅರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಜಾಗೃತಿ ಮಾಡಲಾಗುತ್ತೆ. ಶಾಲೆ ಕಾಲೇಜುಗಳಲ್ಲಿ ಕೂಡ ಹೃದಯ ಅರೋಗ್ಯ ದ ತಪಾಸಣೆ ಬಗ್ಗೆ ಜಾಗೃತಿ ಮೂಡಿಸಲು ತೀರ್ಮಾನ ಮಾಡಲಾಗಿದೆ. ಹೃದಯಾಘಾತಗಳ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ. ಬದಲಾಗಿ ನಿಯಮಿತವಾಗಿ ಅರೋಗ್ಯ ತಪಾಸಣೆ, ಉತ್ತಮ ಅರೋಗ್ಯ ಶೈಲಿ ರೂಪಿಸಿಕೊಂಡು ಅರೋಗ್ಯವಾಗಿರಲು ಮನವಿ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!